Breaking NewsLatestಕೊಡಗುಕ್ರೈಂಜಿಲ್ಲಾ ಸುದ್ದಿರಾಜ್ಯಸುದ್ದಿ
ಬಲಿದಾನ್ ದಿವಸ: ಮಡಿಕೇರಿಯಲ್ಲಿ ಪಂಜಿನ ಮೆರವಣಿಗೆ

ಮಡಿಕೇರಿ: ಮಡಿಕೇರಿ ನಗರದ ಯುವ ಮೋರ್ಚಾ ಹಾಗೂ ಮಡಿಕೇರಿ ಗ್ರಾಮಾಂತರ ಮಂಡಳ, ಬಿಜೆಪಿ ಯುವ ಮೋರ್ಚಾದ ವತಿಯಿಂದ ಪಂಜಿನ ಮೆರವಣಿಗೆ ನಡೆಸಿ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಲಾಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ಪ್ರಧಾನ ಕಾರ್ಯದರ್ಶಿ ಡೀನ್ ಬೋಪಣ್ಣ, ಮಡಿಕೇರಿ ಮಂಡಳ ಅಧ್ಯಕ್ಷ ಕಾಂಗೀರ ಸತೀಶ್, ಬಿಜೆಪಿ ನಗರಾಧ್ಯಕ್ಷ ನವೀನ್ ಪೂಜಾರಿ, ಗ್ರಾಮಾಂತರ ಮಂಡಳ ಅಧ್ಯಕ್ಷ ಹೇಮಂತ್ ತೋರೆರ, ಜಿಲ್ಲಾ ಯುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಯಶ್ವಿನ್, ಮಡಿಕೇರಿ ನಗರ ಬಿಜೆಪಿ ಅಧ್ಯಕ್ಷ ಮನು ಮಂಜುನಾಥ್, ಉಪಾಧ್ಯಕ್ಷ ಬಿ.ಕೆ. ಜಗದೀಶ್, ಓಬಿಸಿ ಮೋರ್ಚಾ ಅಧ್ಯಕ್ಷ ರಾಜೇಶ್ ಸೇರಿದಂತೆ ಇನ್ನಿತರರು ಇದ್ದರು.
