Breaking NewsLatestರಾಷ್ಟ್ರೀಯಸುದ್ದಿ
ರಿಲಯನ್ಸ್ ನಿರ್ದೇಶಕರ ಸ್ಥಾನಕ್ಕೆ ಅನಿಲ್ ಅಂಬಾನಿ ರಾಜೀನಾಮೆ!

ರಿಲಯನ್ಸ್ ಪವರ್ ಮತ್ತು ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್ ನಿರ್ದೇಶಕ ಸ್ಥಾನಕ್ಕೆ ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ರಾಜೀನಾಮೆ ನೀಡಿದ್ದಾರೆ.
ಸೆಕ್ಯುರಿಟೀಸ್ ಮತ್ತು ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ ಮಧ್ಯಂತರ ಆದೇಶವನ್ನು ಪಾಲಿಸುವ ಸಲುವಾಗಿ ಕಾರ್ಯನಿರ್ವಹಕೇತರ ನಿರ್ದೇಶಕ ಅನಿಲ್ .ಡಿ. ಅಂಬಾನಿ ರಿಲಯನ್ಸ್ ಪವರ್ ಸಂಸ್ಥೆಯ ಬೋರ್ಡ್ ನಿಂದ ಹೊರ ಬರುತ್ತಿದ್ದಾರೆ ಎಂದು ರಿಲಯನ್ಸ್ ಪವರ್ ತನ್ನ ಬಿಎಸ್ಇ ಫೈಲಿಂಗ್ ನಲ್ಲಿ ತಿಳಿಸಿದೆ.
ಫೆಬ್ರವರಿಯಲ್ಲಿ ಸೆಬಿ ರಿಲಯನ್ಸ್ ಹೋಮ್ ಫೈನಾನ್ಸ್ ಲಿಮಿಟೆಡ್, ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಮತ್ತು ಇತರ ಮೂವರನ್ನು ಅವ್ಯವಹಾರದ ಆರೋಪದ ಮೇಲೆ ಸ್ಟಾಕ್ ಎಕ್ಸ್ಚೆಂಜ್ ಮಾರುಕಟ್ಟೆಯಿಂದ ನಿರ್ಬಂಧಿಸಿತ್ತು.
ರಿಲಯನ್ಸ್ ಪವರ್ ಮತ್ತು ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್ ಮಂಡಳಿಗಳಲ್ಲಿ ಐದು ವರ್ಷಗಳ ಅವಧಿಗೆ ಹೆಚ್ಚುವರಿ ನಿರ್ದೇಶಕರಾಗಿ ರಾಹುಲ್ ಸರಿನ್ ಅವರನ್ನು ನೇಮಿಸಲಾಗಿದೆ ಎಂದು ಎರಡೂ ರಿಲಯನ್ಸ್ ಗ್ರೂಪ್ ಕಂಪನಿಗಳು ತಿಳಿಸಿವೆ.
