Breaking NewsLatestರಾಜ್ಯಸುದ್ದಿ

ಇಸ್ರೇಲ್ ಪ್ರಧಾನಿಗೆ ಕೊರೊನಾ: ಮೋದಿ ರಾಜ್ಯ ಪ್ರವಾಸ ದಿಢೀರ್ ರದ್ದು

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ರಾಜ್ಯ ಪ್ರವಾಸ ರದ್ದುಗೊಳಿಸಿರುವುದಾಗಿ ಪ್ರಧಾನಿ ಕಚೇರಿಯಿಂದ ರಾಜ್ಯ ಸರ್ಕಾರಕ್ಕೆ ಮಾಹಿತಿ ರವಾನಿಸಲಾಗಿದೆ. ಏಪ್ರಿಲ್ 5ರಂದು ನರೇಂದ್ರ ಮೋದಿ, ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ ಜೊತೆ ಬೆಂಗಳೂರಿಗೆ ಆಗಮಿಸಿಬೇಕಿತ್ತು. ಆದ್ರೆ ನಫ್ತಾಲಿ ಬೆನೆಟ್ ಗೆ ಕೊರೊನಾ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ರಾಜ್ಯ ಪ್ರವಾಸ ರದ್ದು ಮಾಡಲಾಗಿದೆ.

ಏಪ್ರಿಲ್ 5ರಂದು ಪ್ರಧಾನಿ ಮೋದಿ ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ ಜೊತೆ ರಾಜ್ಯಕ್ಕೆ ಬರಬೇಕಿತ್ತು. ಏಪ್ರಿಲ್ 5ರಂದು ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಲೋಕಾರ್ಪಣೆ, ಮೇಲ್ದರ್ಜೆಗೇರಿಸಿದ 150 ಐಟಿಐ ಕೇಂದ್ರಗಳ ಉದ್ಘಾಟನೆ ಹಾಗೂ ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಗೆ ಶಂಕುಸ್ಥಾಪನೆ ಸೇರಿ ಮೂರು ಕಾರ್ಯಕ್ರಮಗಳಲ್ಲಿ ಮೋದಿ ಪಾಲ್ಗೊಳ್ಳಬೇಕಿತ್ತು.

ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ಗೆ ಕೊರೊನಾ ತಗುಲಿರುವ ಬಗ್ಗೆ ಇಸ್ರೇಲ್ ಪ್ರಧಾನಿ ಕಚೇರಿಯಿಂದ ಸೋಮವಾರ ಮಾಹಿತಿ ನೀಡಿದ್ದಾರೆ. ಬೆನೆಟ್ ಆರೋಗ್ಯವಾಗಿದ್ದಾರೆ ಮತ್ತು ಮನೆಯಲ್ಲಿ ಸೆಲ್ಫ್ ಐಸೋಲೇಟ್ ಆಗಿದ್ದಾರೆ ಎಂದು ಇಸ್ರೇಲ್ ಪ್ರಧಾನಿ ಕಚೇರಿ ಮಾಹಿತಿ ನೀಡಿದೆ.

Spread the love

Related Articles

Leave a Reply

Your email address will not be published. Required fields are marked *

Back to top button