Breaking NewsLatestರಾಜ್ಯಸುದ್ದಿ
135 ಮಂದಿ ದಕ್ಷ ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಬೆಂಗಳೂರು: ದಕ್ಷತೆಯಿಂದ ಕಾರ್ಯ ನಿರ್ವಹಿಸಿರುವ ರಾಜ್ಯದ ಒಟ್ಟು 135 ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ 2021ನೇ ಸಾಲಿನ ಮುಖ್ಯಮಂತ್ರಿ ಪದಕ ನೀಡಲಾಗತ್ತಿದೆ. ಏಪ್ರಿಲ್ 2ರಂದು ಬೆಳಿಗ್ಗೆ 8 ಗಂಟೆಗೆ ಕೋರಮಂಗದಲ್ಲಿರುವ ಕೆಎಸ್ಆರ್ ಪಿ ಪಡೆ 3ರ ಮೈದಾನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದ್ದಾರೆ.
ಪೊಲೀಸ್ ಇಲಾಖೆಯಲ್ಲಿಕರ್ತವ್ಯ ನಿರ್ವಹಿಸುತ್ತಿರುವ ಡಿವೈಎಸ್ ಪಿ, , ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿಗೆ ಪದಕ ನೀಡಲಾಗುತ್ತಿದೆ. ಸಿಐಡಿ ಡಿವೈಎಸ್ಪಿ ವೀರೇಂದ್ರ ಕುಮಾರ್, ಉಡುಪಿ ಡಿಎಆರ್ ವಿಭಾಗದ ಡಿವೈಎಸ್ಪಿ ರಾಘವೇಂದ್ರ ಆರ್ ನಾಯಕ್, ಇನ್ಸ್ಪೆಕ್ಟರ್ಗಳಾದ ಗೋವಿಂದಪುರ ಠಾಣೆ ಪಿಐ ಪ್ರಕಾಶ್, ಮಂಜುನಾಥ್, ನಟರಾಜ್, ಶಿವಕುಮಾರ್, ರಾವ್ ಗಣೇಶ್ ಜನಾರ್ಧನ್, ಶಿವಣ್ಣ ನಾಯಕ್, ರವೀಂದ್ರ ಸೇರಿದಂತೆ ಒಟ್ಟು 135 ಅಧಿಕಾರಿ ಮತ್ತು ಸಿಬ್ಬಂದಿಗೆ ಸಿಎಂ ಪದಕ ಪ್ರಕಟ ಮಾಡಲಾಗಿದೆ.
