
ರಾಮೇಶ್ವರಂ: ಶ್ರೀಲಂಕಾ ನೌಕಾಪಡೆಯು ತನ್ನ ಪ್ರಾದೇಶಿಕ ನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ತಮಿಳುನಾಡಿನ ಮೂವರು ಭಾರತೀಯ ಮೀನುಗಾರರನ್ನು ಬಂಧಿಸಿದೆ.
ಪುದುಕೊಟ್ಟೈ ಜಿಲ್ಲೆಯ ಮೂವರು ಮೀನುಗಾರರು ಕಚ್ಚತೀವು ಬಳಿ ಮೀನುಗಾರಿಕೆ ನಡೆಸುತ್ತಿದ್ದಾಗ ತಡರಾತ್ರಿ ಬಂಧಿಸಲಾಗಿದೆ ಹಾಗೂ ದೋಣಿಯನ್ನೂ ವಶಪಡಿಸಿಕೊಳ್ಳಲಾಗಿದೆ ಎಂದು ರಾಜ್ಯ ಮೀನುಗಾರಿಕಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಎರಡು ದಿನಗಳ ಹಿಂದೆ ಅಂತರಾಷ್ಟ್ರೀಯ ಸಮುದ್ರ ಗಡಿಯನ್ನು ಉಲ್ಲಂಘಿಸಿದ ಆರೋಪದ ಮೇಲೆ ನಾಲ್ವರು ಮೀನುಗಾರರನ್ನು ಲಂಕಾ ನೌಕಾಪಡೆ ಬಂಧಿಸಿತ್ತು. ಲಂಕಾ ನೌಕಾಪಡೆಯ ಇತ್ತೀಚಿನ ಘಟನೆಯ ಬಗ್ಗೆ ಮೀನುಗಾರರ ಪ್ರತಿನಿಧಿಗಳು ಆತಂಕ ವ್ಯಕ್ತಪಡಿಸಿದ್ದಾರೆ ಮತ್ತು ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿದ್ದಾರೆ. ಈ ತಿಂಗಳೊಂದರಲ್ಲೆ ಸುಮಾರು 20ಕ್ಕೂ ಹೆಚ್ಚು ಭಾರತೀಯ ಮೀನುಗಾರರನ್ನ ಶ್ರೀಲಂಕಾ ಬಂಧಿಸಿದೆ.
