ಏಪ್ರಿಲ್ 1 ದಾಸೋಹ ದಿನ: ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಶ್ರೀಗಳ ಹೆಸರು ಘೋಷಣೆ

ತುಮಕೂರು: ಇಂದು ನಡೆದಾಡುವ ದೇವರು ಶ್ರೀ ಶಿವಕುಮಾರ್ ಸ್ವಾಮೀಜಿ 115ನೇ ಜನ್ಮದಿನೋತ್ಸವ ಹಿನ್ನೆಲೆ ಸಿದ್ಧಗಂಗಾ ಮಠದಲ್ಲಿ ಗುರುವಂದನಾ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಅಮಿತ್ ಷಾ , ಯುಡಿಯೂರಪ್ಪ, ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಿರಿಯ ರಾಜಕೀಯ ಗಣ್ಯರು ಭಾಗಿಯಾಗಿದ್ದರು.
ಈ ವೇಳೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಎಲ್ಲಾ ಸಮುದಾಯದವರನ್ನು ಸೇರಿಸಿ ತ್ರಿವಿಧ ದಾಸೋಹ ಮಾಡಿದ ಸಿದ್ದಗಂಗಾ ಶ್ರೀಗಳ ಸ್ಮರಣಾರ್ಥ ಏಪ್ರಿಲ್ 1 ಅನ್ನು ದಾಸೋಹ ದಿನವೆಂದೂ, ಸರ್ಕಾರಿ ಶಾಲೆಗಳಲ್ಲಿ ಜಾರಿಯಲ್ಲಿರುವ ಮಧ್ಯಾಹ್ನದ ಬಿಸಿಯೂಟಕ್ಕೆ ಡಾ. ಶಿವಕುಮಾರ ಸ್ವಾಮೀಜಿ ಬಿಸಿಯೂಟ ಯೋಜನೆ ಎಂದು ಹೆಸರಿಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.
ಇನ್ನು ಎಲ್ಲಾ ಸಮುದಾಯದವರನ್ನು ಸೇರಿಸಿ ತ್ರಿವಿಧ ದಾಸೋಹ ಮಾಡಿದವರು ಶ್ರೀಗಳು. ಇದೊಂದು ದೈವ ಶಕ್ತಿ, ಇದು ಮನುಷ್ಯರ ಶಕ್ತಿ ಅಲ್ಲ. ಶ್ರೀಗಳ ಧ್ಯೇಯ ಶ್ರದ್ಧೆ, ನಿಷ್ಠೆ, ಪರಿಶ್ರಮವನ್ನು ನಾವು ಪರಿಪಾಲನೆ ಮಾಡಬೇಕು. ಶ್ರೀಗಳಿಗೆ ಜಾತಿ ಭೇದ ಇರಲಿಲ್ಲ. ಸರ್ವೋದಯ ಪರಿಕಲ್ಪನೆ ಈ ಮಠದಲ್ಲಿ ನಿತ್ಯ ನಿರಂತರವಾಗಿ ನಡೆಯುತ್ತಿದೆ. ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಶ್ರೀ ಶಿವಕುಮಾರ್ ಸ್ವಾಮೀಜಿ ಹೆಸರಿಡಲಾಗುವುದು ಎಂದು ವೇದಿಕೆ ಮೇಲೆಯೇ ಘೋಷಿಸಿದರು.
