Breaking NewsLatestರಾಜ್ಯಸುದ್ದಿ

ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿದ ಭಾಸ್ಕರ್ ರಾವ್!

ಬೆಂಗಳೂರು: ಐಪಿಎಸ್ ಸೇವೆಗೆ ಭಾಸ್ಕರ್ ರಾವ್ ಗುಡ್ ಬೈ ಹೇಳಿದ್ದಾರೆ. ಪ್ರಸ್ತುತ ಇವರು ರೈಲ್ವೇ ಇಲಾಖೆಯ ಎಡಿಜಿಪಿಯಾಗಿದ್ದರು.
ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸ್ವಯಂ ನಿವೃತ್ತಿ ಕೋರಿ 2021ರ ಸೆಪ್ಟೆಂಬರ್ 16ರಂದು ಅರ್ಜಿ ಸಲ್ಲಿಸಿದ್ದರು. ನಿರ್ಧಾರ ಪುನರ್ ಪರಿಶೀಲನೆಗೆ ಕೇಂದ್ರ ಗೃಹ ಸಚಿವಾಲಯ ಅವಕಾಶ ನೀಡಿತ್ತು.

3 ತಿಂಗಳೊಳಗೆ ಗೃಹ ಸಚಿವಾಲಯ ಸಂಬಂಧಿಸಿದ ಅಧಿಕಾರಿಯನ್ನ ಸಂಪರ್ಕಿಸಬೇಕು. 6 ತಿಂಗಳುಗಳೇ ಕಳೆದರೂ ಗೃಹ ಸಚಿವಾಲಯದ ಉತ್ತರ ಬಾರದ ಹಿನ್ನೆಲೆಯಲ್ಲಿ ಆಲ್ ಇಂಡಿಯಾ ಸರ್ವಿಸ್ ಆಕ್ಟ್ 16(2)ನಡಿ ಸೇವೆಗೆ ಗುಡ್ ಬೈ ಹೇಳಿದ್ದಾರೆ.

ಎಐಎಸ್ ಆಕ್ಟ್ 16(2) ಪ್ರಕಾರ ಸಂಬಂಧಿಸಿದ ಅಧಿಕಾರಿ 50 ವರ್ಷ ವಯಸ್ಸು ದಾಟಿರಬೇಕು. 20 ವರ್ಷ ಸೇವೆ ಪೂರ್ಣಗೊಳಿಸಿರಬೇಕು. ನಿವೃತ್ತಿಗೆ ಮನವಿ ಸಲ್ಲಿಸುವಾಗ ಅಮಾನತ್ತಿನಲ್ಲಿರಬಾರದು. ಎಐಎಸ್ ಆಕ್ಟ್ 16(2)ನಡಿ ನಿವೃತ್ತಿಗೆ ಅರ್ಹರಿರುವ ಕಾರಣ ಅಧಿಕೃತವಾಗಿ ಸೇವೆಗೆ ರಾಜೀನಾಮೆ ನೀಡಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button