Breaking NewsLatestಜಿಲ್ಲಾ ಸುದ್ದಿಹುಬ್ಬಳ್ಳಿ - ಧಾರವಾಡ

ಯುವಕನಿಗೆ ದುಷ್ಕರ್ಮಿಗಳಿಂದ ಚಾಕು ಇರಿತ!

ಧಾರವಾಡ: ಅಪ್ರಾಪ್ತನಿಗೆ ನಾಲ್ಕೈದು ಮಂದಿ ದುಷ್ಕರ್ಮಿಗಳ ತಂಡ ಚಾಕುವಿನಿಂದ ಕುತ್ತಿಗೆ ಭಾಗಕ್ಕೆ ಇರಿದು ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಧಾರವಾಡದ ಮಾಳಾಪುರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ನಗರದ ಮಾಳಾಪುರದ ಚೊಳ್ಳನವರ ಕುಟುಂಬದ 14 ವರ್ಷದ ಯುವಕನಿಗೆ ಚಾಕು ಇರಿಯಲಾಗಿದೆ. ಗಂಭೀರವಾಗಿ ಗಾಯಗೊಂಡ ಯುವಕನನ್ನು ಸ್ಥಳೀಯರು ತಕ್ಷಣವೇ ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದಾರೆ. ದುಷ್ಕರ್ಮಿಗಳು ಕುತ್ತಿಗೆ ಭಾಗಕ್ಕೆ ಚಾಕುವಿನಿಂದ ಇರಿದಿದ್ದಾರೆ. ಇನ್ನೂ ಘಟನೆಗೆ ಕಾರಣವೇನು ಎಂಬುವುದರ ಕುರಿತು ಮಾಹಿತಿ ಲಭ್ಯವಾಗಬೇಕಿದೆ.

ಸದ್ಯ ಯುವಕನಿಗೆ ಜಿಲ್ಲಾಸ್ಪತ್ರೆಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಪ್ರಾಣಾಪಾಯದಿಂದ ಯುವಕ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ. ಈ ಘಟನೆ ಸಂಬಂಧ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Spread the love

Related Articles

Leave a Reply

Your email address will not be published. Required fields are marked *

Back to top button