Breaking NewsLatestಮೆಟ್ರೋರಾಜ್ಯಸುದ್ದಿ

ಶೀಘ್ರದಲ್ಲೇ ಹಾಲಿನ ದರ ಹೆಚ್ಚಳ ಸಾಧ್ಯತೆ!

ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ದಿನದಿಂದ ದಿನಕ್ಕೆ ಬೆಲೆ ಏರಿಕೆಯಾಗುತ್ತದೆ. ಇದರಿಂದ ಜನರು ಹೈರಾಣಾಗಿ ಹೋಗಿದ್ದಾರೆ. ಈ ನಡುವೆಯೇ ಜನರಿಗೆ ಮತ್ತೊಂದು ಶಾಕ್ ಎದುರಾಗಿದೆ. ಶೀಘ್ರವೇ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆ ಇದೆ. ಹಾಲಿನ ದರ ಏರಿಸಲು 1 ತಿಂಗಳಿಂದ ನಿರಂತರ ಸರ್ಕಸ್ ಮಾಡಲಾಗುತ್ತಿದೆ. ಈಗಾಗಲೇ KERC ವಿದ್ಯುತ್ ದರ ಏರಿಕೆಗೆ ಅಸ್ತು ಎಂದಿದೆ. ಹೀಗಾಗಿ ಈಗ ಹಾಲಿನ ದರ ಏರಿಸಲು ಹಾಲು ಒಕ್ಕೂಟಗಳು ಪಟ್ಟು ಹಿಡಿದಿವೆ.

ವಿದ್ಯುತ್ ದರದಂತೆ ಹಾಲಿನ ದರವನ್ನೂ ಏರಿಸಲು ಒತ್ತಾಯ ಕೇಳಿ ಬಂದಿದೆ. ಪ್ರತಿ ಲೀ.ಗೆ 5 ರೂ. ಏರಿಸಲು ಹಾಲು ಒಕ್ಕೂಟಗಳು ಮನವಿ ಮಾಡಿವೆ. 14 ಹಾಲು ಒಕ್ಕೂಟಗಳು ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಮಾಡಲು ಸಿದ್ದತೆ ಮಾಡಿಕೊಂಡಿವೆ. ಇದೇ ಏಪ್ರಿಲ್ 10ರೊಳಗೆ ಬೊಮ್ಮಾಯಿ ಭೇಟಿ ಮಾಡಲು ನಿರ್ಧಾರ ಮಾಡಿವೆ. ಈಗಾಗಲೇ ಈ ಬಗ್ಗೆ KMF ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ವ್ಯವಸ್ಥಾಪಕ ನಿರ್ದೇಶಕ ಸತೀಶ್ ಜೊತೆ ಚರ್ಚೆ ನಡೆಸಿದ್ದಾರೆ. ಇನ್ನೆರಡು ದಿನಗಳಲ್ಲಿ ಸಿಎಂ ಜೊತೆಗೆ ಚರ್ಚೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

Spread the love

Related Articles

Leave a Reply

Your email address will not be published. Required fields are marked *

Back to top button