Breaking NewsLatestಜಿಲ್ಲಾ ಸುದ್ದಿದಕ್ಷಿಣ ಕನ್ನಡ

ಕಲ್ಲಡ್ಕ ಪ್ರಭಾಕರ್ ಆರೋಗ್ಯದಲ್ಲಿ ವ್ಯತ್ಯಾಸ: ಆಸ್ಪತ್ರೆಗೆ ದಾಖಲು

ಮಂಗಳೂರು: ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಆರೋಗ್ಯದಲ್ಲಿ ಏರುಪೇರಾಗಿದ್ದು ನಗರದ ಎ ಜೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕದ ಮನೆಯಲ್ಲಿ ಪ್ರಭಾಕರ್ ಅವರಿಗೆ ಮಂಗಳವಾರ ಸಂಜೆ 6 ಗಂಟೆಗೆ ಸುಸ್ತು ಕಾಣಿಸಿಕೊಂಡಿದ್ದು ತಪಾಸಣೆಗಾಗಿ ಎ ಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಗ್ಯದ ಬಗ್ಗೆ ನಿಗಾವಹಿಸಲು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಪ್ರಭಾಕರ್ ಭಟ್ ಅವರ ಆರೋಗ್ಯ ಸ್ಥಿರವಾಗಿದ್ದು, ಗಾಳಿ ಸುದ್ದಿಗೆ ಕಿವಿಗೊಡಬೇಡಿ ಎಂದು ಆಸ್ಪತ್ರೆಗೆ ಭೇಟಿ ನೀಡಿದ್ದ ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button