ರಾಷ್ಟ್ರೀಯಸುದ್ದಿ

ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್ ದೇಶಮುಖ್ ಬಂಧಿಸಿದ ಸಿಬಿಐ

ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 2021ರ ನವೆಂಬರ್ ನಲ್ಲಿ ಅನಿಲ್ ದೇಶಮುಖ್ ರನ್ನ ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಭ್ರಷ್ಟಾಚಾರದ ಪ್ರತ್ಯೇಕ ಪ್ರಕರಣದಲ್ಲಿ ದೇಶಮುಖ್ ರನ್ನ ವಶಕ್ಕೆ ಪಡೆಯಲು ಮುಂಬೈ ನ್ಯಾಯಾಲಯ ಸಿಬಿಐಗೆ ಅವಕಾಶ ನೀಡಿತ್ತು.

ನಿರೀಕ್ಷಣಾ ಜಾಮೀನು ಕೋರಿ ಅನಿಲ್ ದೇಶಮುಖ್ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ವಿಚಾರಣೆ ನಡೆಸಿದ ಕೋರ್ಟ್ ಜಾಮೀನು ಅರ್ಜಿ ತಿರಸ್ಕರಿಸಿತ್ತು. ಜೊತೆಗೆ ಇದೇ ಪ್ರಕರಣದಲ್ಲಿ ಮುಂಬೈ ಸೆಷನ್ಸ್ ಕೋರ್ಟ್ ಕೂಡ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.

ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ವೀರ್ ಸಿಂಗ್ ಅವರು ದೇಶಮುಖ್ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದು ಬಳಿಕ ದೇಶಮುಖ್ ರನ್ನ ಗೃಹ ಸಚಿವರ ಸ್ಥಾನದಿಂದ ಕೆಳಗಿಳಿಸಲಾಗಿತ್ತು.

Spread the love

Related Articles

Leave a Reply

Your email address will not be published. Required fields are marked *

Back to top button