Breaking NewsLatestರಾಜ್ಯರಾಷ್ಟ್ರೀಯಸುದ್ದಿ

ಅಮರನಾಥ ಯಾತ್ರಿಕರಿಗೆ ನೋಂದಣಿ ಆರಂಭ

ಶ್ರೀನಗರ: ಕಳೆದ ಎರಡು ವರ್ಷಗಳಿಂದ ಕೊರೊನಾದಿಂದ ಅಮರನಾಥ ಯಾತ್ರೆಯನ್ನು ರದ್ದು ಮಾಡಲಾಗಿತ್ತು. ಆದರೆ ಈ ಬಾರಿ ಯಾತ್ರೆಗೆ ಚಾಲನೆ ನೀಡಲಾಗಿದೆ. ಏಪ್ರಿಲ್ 11 ರಿಂದ ಅಮರನಾಥ ಯಾತ್ರೆಗೆ ಭಕ್ತಾದಿಗಳು ನೋಂದಣಿ ಮಾಡಿಕೊಳ್ಳಬಹುದು ಎಂದು ಅಮರನಾಥಜೀ ಪುಣ್ಯ ಕ್ಷೇತ್ರದ ಸಿಇಓ ನಿತೀಶ್ವರ್ ಕುಮಾರ್ ಹೇಳಿದ್ದಾರೆ.

ಜೂನ್ 30 ರಿಂದ ಆಗಸ್ಟ್ 11ರ ವರೆಗೂ ಯಾತ್ರೆ ನಡೆಸಲು ತೀರ್ಮಾನಿಸಲಾಗಿದ್ದು, ಯಾತ್ರೆ ಕೈಗೊಳ್ಳುವ ಭಕ್ತಾದಿಗಳು ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು ಎಂದು ತಿಳಿಸಲಾಗಿದೆ. ಶ್ರೈನ್ ಬೋರ್ಡ್‍ನ ವೆಬ್‍ಸೈಟ್ ಅಥವಾ ಮೊಬೈಲ್ ಅಪ್ಲಿಕೇಶನ್ ಮೂಲಕ ನೋಂದಣಿ ಮಾಡಿಕೊಳ್ಳಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ 3,000 ಜನರು ಉಳಿದುಕೊಳ್ಳಲು ವ್ಯವಸ್ಥೆ ಇರುವ ಯಾತ್ರಿ ನಿವಾಸ ನಿರ್ಮಾಣ ಮಾಡಲಾಗಿದೆ. ಅಲ್ಲಿ ಭಕ್ತಾಧಿಗಳು ತಂಗಲು ಅವಕಾಶ ಮಾಡಿಕೊಡಲಾಗಿದೆ.

Spread the love

Related Articles

Leave a Reply

Your email address will not be published. Required fields are marked *

Back to top button