Breaking NewsLatestರಾಷ್ಟ್ರೀಯಸುದ್ದಿ

ಮುಂಬೈ ದಾಳಿ ಮಾಸ್ಟರ್ ಮೈಂಡ್ ಗೆ 31 ವರ್ಷ ಜೈಲು ಶಿಕ್ಷೆ!

ನವದೆಹಲಿ: 26/11ರ ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಗೆ 31 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಪಾಕಿಸ್ತಾನದ ಭಯೋತ್ಪಾದನಾ ವಿರೋಧಿ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ಲಷ್ಕರ್ ಈ ತೋಯ್ಬಾ ಉಗ್ರ ಸಂಘಟನೆಯ ಸಂಸ್ಥಾಪಕ ಹಫೀಜ್ ಸಯೀದ್ ಗೆ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಶಿಕ್ಷೆ ವಿಧಿಸಲಾಗಿದೆ. ಆತನಿಗೆ ಸಂಬಂಧಿಸಿದ ಸಂಪೂರ್ಣ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಸೂಚನೆ ನೀಡಿದೆ. ಜೊತೆಗೆ ಹಫೀಜ್ ಸಯೀದ್ ಅನಧಿಕೃತವಾಗಿ ನಿರ್ಮಿಸಿರುವ ಮಸೀದಿ ಹಾಗೂ ಮದರಸಗಳನ್ನು ವಶಕ್ಕೆ ಪಡೆಯುವಂತೆ ಆದೇಶ ನೀಡಿದೆ.

ಹಲವ ಉಗ್ರ ಸಂಘಟನೆಗಳಿಗೆ ಹಣ ನೀಡುತ್ತಿದ್ದ ಹಿನ್ನೆಲೆಯಲ್ಲಿ ಹಫೀಜ್ ಸಯೀದ್ ಗೆ ಈಗಾಗಲೇ ಕೆಲವೊಂದು ಶಿಕ್ಷೆಗಳನ್ನು ವಿಧಿಸಲಾಗಿದೆ. 2020ರಲ್ಲಿ ಈತನಿಗೆ 15 ವರ್ಷ ಜೈಲು ಶಿಕ್ಷೆಗೆ ಗುರಿ ಮಾಡಲಾಗಿತ್ತು.

2008ರ ನವೆಂಬರ್ 26ರಂದು ನಡೆದ ಮುಂಬೈ ದಾಳಿಯಲ್ಲಿ 166 ಮಂದಿ ಸಾವಿಗೀಡಾಗಿದ್ದು 238 ಮಂದಿ ಗಾಯಗೊಂಡಿದ್ದರು. ಘಟನೆ ಸಂಬಂಧ 2019ರಲ್ಲಿ ಹಫೀಜ್ ನನ್ನು ಬಂಧಿಸಲಾಗಿತ್ತು, ಅದಕ್ಕೂ ಮೊದಲು 2001ರಿಂದ ಒಟ್ಟು 8 ಬಾರಿ ಬಂಧಿಸಿ ಬಿಡುಗಡೆ ಮಾಡಲಾಗಿತ್ತು.

Spread the love

Related Articles

Leave a Reply

Your email address will not be published. Required fields are marked *

Back to top button