ಜಿಲ್ಲಾ ಸುದ್ದಿದಾವಣಗೆರೆ
ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ದಾವಣಗೆರೆ: ಈರುಳ್ಳಿ ಬೆಳೆಗೆ ಸೂಕ್ತ ಬೆಲೆ ಸಿಗದೆ ನಷ್ಟ ಅನುಭವಿಸಿದ ಹಿನ್ನೆಲೆಯಲ್ಲಿ ಮನನೊಂದು ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಜಗಳೂರು ತಾಲ್ಲೂಕಿನ ಸೊಕ್ಕೆ ಗ್ರಾಮದ ಮೈಲಪ್ಪ (60) ಸಾವಿಗೆ ಶರಣಾದ ರೈತ. ತನ್ನ ಹೊಲದಲ್ಲೇ ಮರಕ್ಕೆ ನೇಣು ಹಾಕಿಕೊಂಡು ಈ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ನಾಲ್ಕು ವರ್ಷದಿಂದ ಈರುಳ್ಳಿ ಬೆಳೆಯುತ್ತಿದ್ದ ಮೈಲಪ್ಪ ಸತತ ಬೆಲೆ ಕುಸಿತದಿಂದ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ. ಬೀಜ ಗೊಬ್ಬರ ಹಾಗೂ ಇತರೆ ಖರ್ಚುಗಳಿಗಾಗಿ ಖಾಸಗಿಯಾಗಿ ಸಾಕಷ್ಟು ಸಾಲ ಮಾಡಿಕೊಂಡಿದ್ದ. ಸಾಲದ ಭಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.




