
ಲಕ್ನೋ (ಉತ್ತರ ಪ್ರದೇಶ): ಉತ್ತರ ಪ್ರದೇಶ ವಿಧಾನ ಪರಿಷತ್ತಿನ 27 ಸ್ಥಾನಗಳಿಗೆ ನಡೆದ ದ್ವೈವಾರ್ಷಿಕ ಚುನಾವಣೆಯ ಮತ ಎಣಿಕೆ ಮಂಗಳವಾರ ಪ್ರಾರಂಭವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾರತೀಯ ಚುನಾವಣಾ ಆಯೋಗದ ಪ್ರಕಾರ, ಶನಿವಾರ ರಾಜ್ಯದಲ್ಲಿ ಸರಾಸರಿ ಶೇಕಡಾ 98.11 ಮತದಾನವಾಗಿದೆ. ರಾಯ್ ಬರೇಲಿಯಲ್ಲಿ ಅತಿ ಹೆಚ್ಚು ಶೇಕಡಾ 99.35ರಷ್ಟು ಮತದಾನವಾಗಿದೆ. ಗೋರಖ್ಪುರದಲ್ಲಿ ಕನಿಷ್ಟ ಶೇಕಡಾ 96.50ರಷ್ಟು ಮತದಾನವಾಗಿದೆ.
95 ಅಬ್ಯರ್ಥಿಗಳು ಕಣದಲ್ಲಿದ್ದು, 793 ಕೇಂದ್ರಗಳಲ್ಲಿ ಮತದಾನ ನಡೆದಿದೆ ಎಂದು ಉತ್ತರ ಪ್ರದೇಶದ ಚುನಾವಣಾಧಿಕಾರಿ ತಿಳಿಸಿದ್ದಾರೆ. ಈ ಮತದಾನದಲ್ಲಿ 1,20,657 ಮತದಾರರು ತಮ್ಮ ಹಕ್ಕು ಚಲಾಯಿಸಲು ಅರ್ಹರಾಗಿದ್ದರು.




