Breaking NewsLatestಜಿಲ್ಲಾ ಸುದ್ದಿರಾಜ್ಯಸುದ್ದಿಹುಬ್ಬಳ್ಳಿ - ಧಾರವಾಡ
ದಿಡ್ಡಿ ಹನುಮಂತ ದೇವಸ್ಥಾನಕ್ಕೂ ಬಿದ್ದ ಕಲ್ಲುಗಳು; ಹೆಚ್ಚಿದ ಕೋಮು ಗಲಭೆ

ಹುಬ್ಬಳ್ಳಿ: ವಾಣಿಜ್ಯನಗರಿಯಲ್ಲಿ ನಿನ್ನೆ ರಾತ್ರಿ ನಡೆದ ಘಟನೆ ಕೋಮು ಗಲಭೆ ಸೃಷ್ಟಿಸುವ ವಾತಾವರಣ ನಿರ್ಮಾಣ ಮಾಡುತ್ತಿದೆ. ಮುಸ್ಲಿಂ ಧಾರ್ಮಿಕತೆಗೆ ಧಕ್ಕೆ ಉಂಟಾಗುವ ವಿಡಿಯೋ ಪೋಸ್ಟ್ ಆದ ಬೆನ್ನಲ್ಲೇ, ಕಿಡಿಗೇಡಿಗಳು ಹಳೇ ಹುಬ್ಬಳ್ಳಿಯ ದಿಡ್ಡಿ ಹನುಮಂತ ದೇವಸ್ಥಾನದ ಮೇಲೆಯೂ ಕಲ್ಲು ತೂರಾಟ ನಡೆಸಿದ್ದಾರೆ.
ಕಳೆ ದಿನ ತಡರಾತ್ರಿ ಹಳೇ ಹುಬ್ಬಳ್ಳಿಯ ಪೊಲೀಸ್ ಠಾಣೆ ಎದುರಿನಲ್ಲಿ ನಡೆದ ಕಲ್ಲು ತೂರಾಟದ ಬಿಸಿ ದಿಡ್ಡಿ ಹನುಮಂತ ದೇವರ ದೇವಸ್ಥಾನಕ್ಕೂ ತಟ್ಟಿದೆ. ದೇವಸ್ಥಾನದ ಅಂಗಳದಲ್ಲಿ ಕಲ್ಲು ಸೇರಿದಂತೆ ಇಟ್ಟಿಗೆ ಚೂರುಗಳು ಬಿದ್ದಿದ್ದು ಮುಖ್ಯ ದ್ವಾರದ ಗ್ಲಾಸ್ಗಳು ಒಡೆದು ಹಾನಿಯಾಗಿದೆ.
ಕಿಡಿಗೇಡಿಗಳು ಮಾಡಿದ ಕೃತ್ಯದಿಂದಾಗಿ ಹನುಮಂತ ದೇವರ ದೇವಸ್ಥಾನದ ಕಿಟಕಿ ಗಾಜು ಒಡೆದು ಪುಡಿಪುಡಿಯಾಗಿವೆ.
ಈಗಾಗಲೇ ಸಾಕಷ್ಟು ಬಿಗಿ ಭದ್ರತೆ ನಿಯೋಜನೆ ಮಾಡಿದ್ದು, ಪೊಲೀಸ್ ಇಲಾಖೆ ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕಿದೆ ಎನ್ನುವುದು ಸಾರ್ವಜನಿಕರ ಒತ್ತಾಯವಾಗಿದೆ.
