Breaking NewsLatestಕಲಬುರ್ಗಿಕ್ರೈಂಜಿಲ್ಲಾ ಸುದ್ದಿರಾಜ್ಯಸುದ್ದಿ
ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ: ಬಂಧಿತ ಆರೋಪಿಗಳು ಕಲಬುರಗಿ ಜೈಲಿಗೆ ಶಿಫ್ಟ್

ಕಲಬುರಗಿ: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾದ ಆರೋಪಿಗಳನ್ನು ಪೊಲೀಸ್ ಬಂದೋಬಸ್ತನಲ್ಲಿ ಹುಬ್ಬಳ್ಳಿಯಿಂದ ಕಲಬುರಗಿ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ.
ಗಲಭೆಯಲ್ಲಿ ಭಾಗಿಯಾದ 107 ಜನ ಆರೋಪಿಗಳನ್ನು ಮುಂಜಾಗೃತ ಕ್ರಮವಾಗಿ ಹುಬ್ಬಳ್ಳಿಯಿಂದ ಕಲಬುರಗಿಗೆ ಕರೆತರಲಾಗಿದೆ. ಹುಬ್ಬಳ್ಳಿಯಿಂದ ಕಲಬುರಗಿಗೆ ನಾಲ್ಕು ಪೋಲಿಸ್ ವ್ಯಾನ್ ಗಳಲ್ಲಿ ಕರೆತರಲಾಗಿದೆ. ಕಾರಾಗೃಹದ ಬಳಿ ಪ್ರತಿಯೊಬ್ಬರನ್ನು ತಪಾಸಣೆ ಮಾಡಿ ಒಳ ಬಿಡಲಾಗಿದೆ. ಕೇಂದ್ರ ಕಾರಾಗೃಹದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಹುಬ್ಬಳಿಯಲ್ಲಿ ದೇವಸ್ಥಾನ, ಮನೆ, ಪೋಸ್ಟ್ ಆಫೀಸ್, ಪೊಲೀಸ್ ಸ್ಟೇಷನ್ ಮೇಲೆ ಕಲ್ಲು ತೂರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ಆರೋಪಿಗಳು ಇವರಾಗಿದ್ದಾರೆ.
