Breaking NewsLatestಕಲಬುರ್ಗಿಕ್ರೈಂಜಿಲ್ಲಾ ಸುದ್ದಿರಾಜ್ಯಸುದ್ದಿ

ಪಿಎಸ್ಐ ಅಕ್ರಮ ಪ್ರಕರಣ: ನಿರೀಕ್ಷಣಾ ಜಾಮೀನು ನೀಡದಂತೆ ಸಿಐಡಿ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ

ಕಲಬುರಗಿ: ಪಿಎಸ್ಐ ಅಕ್ರಮ ಪ್ರಕರಣದಲ್ಲಿ 15 ದಿನಗಳಿಂದ ತೆಲೆ ಮರೆಸಿಕೊಂಡಿರುವ ದಿವ್ಯಾ ಹಾಗರಗಿ & ಟೀಂಗೆ ನಿರೀಕ್ಷಣಾ ಜಾಮೀನು ನೀಡದಂತೆ ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ತಕರಾರು ಅರ್ಜಿ ಸಲ್ಲಿಸಿದ್ದಾರೆ.

ಪಿಎಸ್ಐ ನೇಮಕಾತಿ ಪರೀಕ್ಷಾ ಅಕ್ರಮ ಪ್ರಮುಖ ತಾಣವಾದ ಜ್ಞಾನಜ್ಯೋತಿ ಶಾಲೆಯ ಮುಖ್ಯಸ್ಥೆ ದಿವ್ಯಾ ಹಾಗರಗಿ, ಪ್ರಾಂಶುಪಾಲಕ ಕಾಶಿನಾಥ್ ಮತ್ತು ಮಂಜುನಾಥ ಮೇಳಕುಂದಿ, ಅರ್ಚನಾ ಹೊನಗೇರಿ, ಸುನಂದಾ ಸಿಐಡಿ ತನಿಖೆಯಿಂದ ತೆಲೆ ಮರೆಸಿಕೊಂಡಿದ್ದು, ಅಜ್ಞಾತ ಸ್ಥಳಕ್ಕೆ ಶೀಫ್ಟ್ ಆಗಿದ್ದಾರೆ.

ಅಜ್ಞಾತ ಸ್ಥಳದಿಂದಲೇ ದಿವ್ಯಾ ಆ್ಯಂಡ್ ಟೀಮ್ ನೀರಿಕ್ಷಣಾ ಜಾಮೀನು ಕೋರಿ ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದೆ. ಆದರೀಗ ನೀರಿಕ್ಷಣಾ ಜಾಮೀನಿಗೆ ಸಿಐಡಿ ತಕರಾರು ಅರ್ಜಿ ಸಲ್ಲಿಸಿದೆ. ಇದು ಸಂಘಟಿಕ ಅಪರಾಧ, ಜಾಮೀನು ಕೊಟ್ಟರೆ ಸಾಕ್ಷಿ ನಾಶ ಪಡಿಸುವ ಸಾಧ್ಯತೆ ಇದೆ. ಕಾರಣ ಈ ಐವರಿಗೆ ನಿರೀಕ್ಷಣಾ ಜಾಮೀನು ನೀಡಬೇಡಿ ಅಂತ ಕಲಬುರಗಿಯ ಒಂದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯಕ್ಕೆ ಸಿಐಡಿ ತಕರಾರು ಅರ್ಜಿ ಸಲ್ಲಿಸಿದೆ.

Spread the love

Related Articles

Leave a Reply

Your email address will not be published. Required fields are marked *

Back to top button