Latestಮನರಂಜನೆಸಿನಿಮಾಸ್ಯಾಂಡಲ್ ವುಡ್

ಡಾ.ರಾಜ್ ಕುಮಾರ್ ಕುಟುಂಬದೊಂದಿಗೆ ಮತ್ತೊಂದು ಸಿನಿಮಾ ಘೋಷಿಸಿದ ಜೇಮ್ಸ್ ನಿರ್ಮಾಪಕ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಸಿನಿಮಾ ಜೇಮ್ಸ್ ಚಿತ್ರಕ್ಕೆ ಬಂಡವಾಳ ಹೂಡಿದ್ದ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಇದೀಗ ಡಾ.ರಾಜ್ ಕುಮಾರ್ ಕುಟುಂಬದ ಜೊತೆ ಮತ್ತೊಂದು ಸಿನಿಮಾ ನಿರ್ಮಾಣ ಮಾಡಲು ಮುಂದಾಗಿದ್ದಾರೆ. ರಾಜ್ ಕುಮಾರ್ ಪುತ್ರಿ ಪೂರ್ಣಿಮಾ ಹಾಗೂ ರಾಮ್ ಕುಮಾರ್ ಪುತ್ರ ಧಿರೇನ್ ರಾಮ್ ಕುಮಾರ್ ನಟನೆಯ ಸಿನಿಮಾವನ್ನ ಕಿಶೋರ್ ಪತ್ತಿಕೊಂಡ ನಿರ್ಮಾಣ ಮಾಡುತ್ತಿದ್ದಾರೆ.

ಇಂದು ಧೀರೇನ್ ರಾಮ್ ಕುಮಾರ್ ಹುಟ್ಟುಹಬ್ಬ. ಈ ಪ್ರಯುಕ್ತ ಇಂದು ಕಿಶೋರ್ ಪ್ರೊಡಕ್ಷನ್ ಲಾಂಛ್ ನಲ್ಲಿ ಮೂಡಿ ಬರಲಿರುವ ಎರಡನೇ ಸಿನಿಮಾದ ಘೋಷಣೆ ಮಾಡಲಿದ್ದಾರೆ. ಸದ್ಯ ಧೀರೇನ್ ‘ಶಿವ 143’ ಸಿನಿಮಾದಲ್ಲಿ ನಟಿಸುತ್ತಿದ್ದು, ಈ ಸಿನಿಮಾ ಕಂಪ್ಲೀಟ್ ಆದ ನಂತರ ಕಿಶೋರ್ ಪತ್ತಿಕೊಂಡ ಜೊತೆ ಕೈ ಜೋಡಿಸಲಿದ್ದಾರೆ. ಈ ಹಿಂದೆ ಡಾಲಿ ಧನಂಜಯ್ ನಟನೆಯ ಬಡವ ರಾಸ್ಕಲ್ ಸಿನಿಮಾ ನಿರ್ದೇಶನ ಮಾಡಿದ್ದ ಶಂಕರ್ ಗುರು ಈ ಚಿತ್ರವನ್ನ ನಿರ್ದೇಶನ ಮಾಡ್ತಿದ್ದಾರೆ.

ಧೀರೇನ್ ನಟನೆಯ ಹೊಸ ಸಿನಿಮಾಗೆ ಇನ್ನೂ ಹೆಸರಿಟ್ಟಿಲ್ಲ. ಇಂದು ಚಿತ್ರದ ಫಸ್ಟ್ ಲುಕ್ ರಿಲೀಸ್ ಮಾಡಲಿದ್ದು ಸದ್ಯದಲ್ಲೇ ಸಿನಿಮಾ ಆರಂಭವಾಗಲಿದೆ.

Spread the love

Related Articles

Leave a Reply

Your email address will not be published. Required fields are marked *

Back to top button