Breaking NewsLatestಜಿಲ್ಲಾ ಸುದ್ದಿರಾಜ್ಯಸುದ್ದಿ

ಅ.2ರವರೆಗೂ ಕರ್ನಾಟಕದಲ್ಲಿ ಮಳೆ!

ಭಾರತದ ಹಲವೆಡೆ ಕಳೆದ ದಿನ ಮತ್ತೆ ಧಾರಾಕಾರ ಮಳೆಯಾಗಿದೆ. ಮುಂದಿನ ಎರಡು ಮೂರು ದಿನಗಳಲ್ಲಿ ಹಲವಾರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಅಧಿಕ ಮಳೆಯಾಗುವ ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾದ ಪರಿಣಾಮ ಕರ್ನಾಟಕದಲ್ಲಿ ಮಳೆಯ ಅಬ್ಬರ ಮತ್ತೆ ಶುರುವಾಗಿದೆ.

ಅ. 2ರವರೆಗೂ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಳಗಾವಿ, ಹಾವೇರಿ, ಬಾಗಲಕೋಟೆ, ಗದಗ, ಯಾದಗಿರಿ, ಕೊಪ್ಪಳ, ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣವಿದ್ದು ಇಂದು ಮಳೆಯಾಗುವ ಸಾಧ್ಯತೆ ಇದೆ. ನೈಋತ್ಯ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿಯಲ್ಲಿ ಮಳೆಯಾಗಬಹುದು.

Spread the love

Related Articles

Leave a Reply

Your email address will not be published. Required fields are marked *

Back to top button