Breaking NewsLatestಜಿಲ್ಲಾ ಸುದ್ದಿಬೆಂಗಳೂರುರಾಜ್ಯಸುದ್ದಿ

ಮಾಜಿ ಸಿಎಂ ಎಸ್.ಎಂ. ಕೃಷ್ಣ ಡಿಸ್ಚಾರ್ಜ್

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಿಎಂ ಎಸ್.ಎಂ. ಕೃಷ್ಣ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ತೀವ್ರ ಜ್ವರದಿಂದ ಬಳಲುತ್ತಿದ್ದ ಎಸ್.ಎಂ. ಕೃಷ್ಣ ಅವರು ಕಳೆದ ವಾರ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು.

ಚಿಕಿತ್ಸೆ ಬಳಿಕ ಇದೀಗ ಎಸ್.ಎಂ. ಕೃಷ್ಣ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.

ಇಂದು ಬೆಳಿಗ್ಗೆ ಎಸ್.ಎಂ. ಕೃಷ್ಣ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಬೆಂಗಳೂರಿನ ಸದಾಶಿವನಗರ ನಿವಾಸಕ್ಕೆ ಆಗಮಿಸಿದ್ದು, ವಿಶ್ರಾಂತಿ ಪಡೆಯುತ್ತಿದ್ದಾರೆ. ಪ್ರಸ್ತುತ ಎಸ್.ಎಂ. ಕೃಷ್ಣ ಆರೋಗ್ಯದಲ್ಲಿ ಗಮನಾರ್ಹ ಸುಧಾರಣೆ ಕಂಡುಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button