Breaking NewsLatestಜಿಲ್ಲಾ ಸುದ್ದಿರಾಜ್ಯರಾಷ್ಟ್ರೀಯಸುದ್ದಿ
ಟಿಪ್ಪು ಎಕ್ಸ್ ಪ್ರೆಸ್ ಹೆಸರು ಬದಲಾವಣೆ: ಬಿಜೆಪಿ ವಿರುದ್ಧ ಓವೈಸಿ ಆಕ್ರೋಶ

ಟಿಪ್ಪು ಎಕ್ಸ್ ಪ್ರೆಸ್ ರೈಲಿನ ಮರುನಾಮಕರಣ ಮಾಡಿದ್ದಕ್ಕೆ ಬಿಜೆಪಿ ವಿರುದ್ಧ ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೇರೆ ರೈಲಿಗೆ ಒಡೆಯರ್ ಅವರ ಹೆಸರು ಇಡಬಹುದಿತ್ತು. ಬ್ರಿಟಿಷರ ವಿರುದ್ಧ ಟಿಪ್ಪು ಸುಲ್ತಾನ್ ಹೋರಾಟ ಮಾಡಿದ್ದಾನೆ.
ಟಿಪ್ಪು ಪರಂಪರೆಯನ್ನು ಅಳಿಸಲು ಬಿಜೆಪಿಗೆ ಸಾಧ್ಯವಿಲ್ಲ ಎಂದು ಓವೈಸಿ ಹೇಳಿದ್ದಾರೆ.
ಬಿಜೆಪಿ ಸರ್ಕಾರ ಟಿಪ್ಪು ಎಕ್ಸ್ ಪ್ರೆಸ್ ಅನ್ನು ಒಡೆಯರ್ ಎಕ್ಸ್ ಪ್ರೆಸ್ ಎಂದು ಮರುನಾಮಕರಣ ಮಾಡಿದೆ. ಬ್ರಿಟಿಷರ ವಿರುದ್ಧ ಟಿಪ್ಪು 3 ಯುದ್ಧಗಳನ್ನು ಮಾಡಿದ ಕಾರಣಕ್ಕಾಗಿ ಬಿಜೆಪಿಯನ್ನು ಕೆರಳಿಸುತ್ತಾನೆ. ಇನ್ನೊಂದು ರೈಲಿಗೆ ಒಡೆಯರ್ ಹೆಸರಿಡಬಹುದಿತ್ತು. ಟಿಪ್ಪು ಪರಂಪರೆಯನ್ನು ಅಳಿಸಲು ಬಿಜೆಪಿಗೆ ಸಾಧ್ಯವಿಲ್ಲ. ಅವರು ಬದುಕಿರುವಾಗ ಬ್ರಿಟಿಷರನ್ನು ಹೆದರಿಸಿದ್ದರು. ಈಗಲೂ ಬ್ರಿಟಿಷ್ ಗುಲಾಮರನ್ನು ಹೆದರಿಸುತ್ತಾರೆ ಎಂದು ಟ್ವೀಟ್ ಮಾಡಿದ್ದಾರೆ.
