Breaking NewsLatestರಾಷ್ಟ್ರೀಯವಿದೇಶಸುದ್ದಿ
ಉಕ್ರೇನ್ ತೊರೆಯಲು ಭಾರತೀಯರಿಗೆ ಸೂಚನೆ

ಕೀವ್: ಉಕ್ರೇನ್ ಮೇಲೆ ರಷ್ಯಾ ದಾಳಿ ತೀವ್ರಗೊಳಿಸಿರುವ ಹಿನ್ನೆಲೆಯಲ್ಲಿ ಕೂಡಲೇ ಭಾರತೀಯ ಪ್ರಜೆಗಳು ದೇಶ ತೊರೆಯಬೇಕು ಎಂದು ಸೂಚನೆ ನೀಡಲಾಗಿದೆ.
ಕೀವ್‌ನಲ್ಲಿ ಇರುವ ಭಾರತೀಯ ರಾಯಭಾರ ಕಚೇರಿ ಬುಧವಾರ ಈ ಸೂಚನೆ ನೀಡಿದೆ.
“ಉಕ್ರೇನ್‌ನಲ್ಲಿ ಭದ್ರತಾ ಪರಿಸ್ಥಿತಿಯು ಹದಗೆಡುತ್ತಿರುವುದರಿಂದ ಹಾಗೂ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಹಗೆತನದ ದಾಳಿಗಳ ಹಿನ್ನೆಲೆಯಲ್ಲಿ ಭಾರತೀಯ ನಾಗರಿಕರು ಉಕ್ರೇನ್‌ಗೆ ಆಗಮಿಸಬಾರದು ಹಾಗೂ ಉಕ್ರೇನ್‌ನಲ್ಲಿರುವ ವಿದ್ಯಾರ್ಥಿಗಳು ಸೇರಿದಂತೆ ಭಾರತೀಯ ನಾಗರಿಕರು ಶೀಘ್ರ ಸ್ವದೇಶಕ್ಕೆ ತೆರಳುವಂತೆ ಸಲಹೆ ನೀಡಲಾಗಿದೆ,’ ಎಂದು ಟ್ವೀಟ್‌ನಲ್ಲಿ ಸೂಚನೆ ನೀಡಲಾಗಿದೆ.
