Breaking NewsLatestಸುದ್ದಿ

ಆಂಧ್ರಪ್ರದೇಶದ ತಿರುಪತಿಯ 2 ಪಟಾಕಿ ಅಂಗಡಿಗಳಲ್ಲಿ ಅಗ್ನಿ ಅವಘಡ

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಎಲ್ಲಡೆ ಪಟಾಕಿಗಳ ಮಾರಾಟ – ಖರೀದಿ ಜೋರಾಗಿಯೇ ನಡೆಯುತ್ತಿದೆ. ಆದರೆ ಆಂಧ್ರಪ್ರದೇಶದಲ್ಲಿ ದುರಂತವೊಂದು ಸಂಭವಿಸಿದ್ದು ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯ ವಡಮಲಪೇಟಾದಲ್ಲಿ ಎರಡು ಪಟಾಕಿ ಅಂಗಡಿಗಳಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ.

“ತಿರುಪತಿಯ ವಡಮಲಪೇಟಾದಲ್ಲಿ ಎರಡು ಪಟಾಕಿ ಅಂಗಡಿಗಳಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, 16 ರಿಂದ 18 ಲಕ್ಷ ರೂಪಾಯಿ ಮೌಲ್ಯದ ಪಟಾಕಿಗಳು ಬೆಂಕಿಗೆ ಆಹುತಿಯಾಗಿವೆ” ಎಂದು ತಿರುಪತಿ ಪೊಲೀಸರು ತಿಳಿಸಿದ್ದಾರೆ. ಅಗ್ನಿ ಅವಘಡ ಸಂಭವಿಸಲು ಕಾರಣವೇನು ಎಂಬುದು ಇನ್ನೂ ತಿಳಿದು ಬಂದಿಲ್ಲ ಎನ್ನಲಾಗಿದೆ. ಸಂಬಂಧಪಟ್ಟ ಇಲಾಖೆ ಹಾಗೂ ಅಧಿಕಾರಿಗಳು ಕೂಡಲೇ ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ.

Spread the love

Related Articles

Leave a Reply

Your email address will not be published. Required fields are marked *

Back to top button