Breaking NewsLatestರಾಷ್ಟ್ರೀಯಸುದ್ದಿ

ವಾಹನ ಸವಾರರಿಗೆ ಗುಡ್ ನ್ಯೂಸ್ : ಪೆಟ್ರೋಲ್, ಡೀಸೆಲ್ ಬೆಲೆ 2 ರೂ. ಇಳಿಕೆ!

ನವದೆಹಲಿ : ಕೇಂದ್ರ ಸರ್ಕಾರವು ವಾಹನ ಸವಾರರಿಗೆ ಮತ್ತೊಂದು ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ 2 ರೂ. ಇಳಿಕೆಯಾಗುವ ಸಾಧ್ಯತೆ ಇದೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲ ಬೆಲೆ ಕುಸಿತದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 2 ರೂ. ಇಳಿಕೆಯಾಗುವ ಸಾಧ್ಯತೆ ಇದೆ. ಚಿಲ್ಲರೆ ವ್ಯಾಪಾರಿಗಳ ಮಾರ್ಜಿನ್ ಪ್ರತಿ ಲೀಟರ್ ಪೆಟ್ರೋಲ್ ಮೇಲೆ 6 ರೂ. ನಷ್ಟಿದೆ. ಶೀಘ್ರದಲ್ಲೇ ಡೀಸೆಲ್ ಮೇಲಿನ ಅಂಡರ್ ರಿಕವರಿ 10 ರೂ. ಕಡಿಮೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಕೇಂದ್ರ ಸರ್ಕಾರವು 2022 ರ ಮೇ 10 ರಂದು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕ್ರಮವಾಗಿ 8 ಮತ್ತು 6 ರೂ. ಕಡಿಮೆ ಮಾಡಿತ್ತು.

Spread the love

Related Articles

Leave a Reply

Your email address will not be published. Required fields are marked *

Back to top button