Breaking NewsLatestರಾಜ್ಯಸುದ್ದಿ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪ್ರಮೋದ್ ಮುತಾಲಿಕ್ ಸ್ಪರ್ಧೆ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಾವೂ ಸೇರಿದಂತೆ 25 ಮಂದಿ ಕಣಕ್ಕಿಳಿಯಲಿದ್ದು, ಈ ಪೈಕಿ ಐದು ಕ್ಷೇತ್ರಗಳಲ್ಲಿ ಸ್ವಾಮೀಜಿಗಳು ಸ್ಪರ್ಧಿಸಲಿದ್ದಾರೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 25 ಕ್ಷೇತ್ರಗಳಲ್ಲಿ ಹಿಂದೂ ಕಾರ್ಯಕರ್ತರಿಗೆ ಟಿಕೆಟ್ ನೀಡುವಂತೆ ಬಿಜೆಪಿಯನ್ನು ಕೇಳಲಾಗಿತ್ತು.

ಆದರೆ ಇದಕ್ಕೆ ಸೂಕ್ತ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ನಾವುಗಳು ಸ್ವತಂತ್ರವಾಗಿ ಸ್ಪರ್ಧೆಗೆ ಇಳಿಯಲು ನಿರ್ಧರಿಸಿದ್ದೇವೆ ಎಂದರು.

ಇದೇ ಸಂದರ್ಭದಲ್ಲಿ ಹಿಂದೂ ಧರ್ಮದ ಕುರಿತು ಅವಹೇಳನಕಾರಿ ಶಬ್ದ ಬಳಸಿರುವ ಸತೀಶ್ ಜಾರಕಿಹೊಳಿಯವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರಮೋದ್ ಮುತಾಲಿಕ್, 400 ವರ್ಷಗಳ ಹಿಂದೆಯೇ ಹಿಂದೂ ಶಬ್ದದ ಉಲ್ಲೇಖವಿದೆ. ನಾಸ್ತಿಕನಾಗಿರುವ ಸತೀಶ್ ಜಾರಕಿಹೊಳಿ, ಹಿಂದೂ ಧರ್ಮವನ್ನು ಕೆಟ್ಟದಾಗಿ ಬಿಂಬಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

Spread the love

Related Articles

Leave a Reply

Your email address will not be published. Required fields are marked *

Back to top button