Breaking NewsLatestರಾಷ್ಟ್ರೀಯಸುದ್ದಿ

ತಮಿಳುನಾಡಿನಲ್ಲಿ ಭಾರಿ ಮಳೆ!

ಚೆನ್ನೈ: ತಮಿಳುನಾಡು ರಾಜ್ಯದಲ್ಲಿ ನಿರಂತರ ಮಳೆಯಾಗುತ್ತಿದೆ. ಮೈಲಾದುತುರೈ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಮಳೆ ಪೀಡಿತ ಮತ್ತು ಜಲಾವೃತ ಪ್ರದೇಶಗಳನ್ನು ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಜಲಾವೃತ ಪ್ರದೇಶಗಳಲ್ಲಿ ನೀರಿನ ಒಳಚರಂಡಿ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆ ಕೆಲಸ ಮಾಡುತ್ತಿದೆ. ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆಯಲಿದೆ ಆದರೆ ಯಾವುದೇ ಅಪಾಯವಿಲ್ಲ ಎಂದು ಅವರು ತಿಳಿಸಿದರು.

ಎಂ.ಕೆ.ಸ್ಟಾಲಿನ್ ಅವರು ರಾಜ್ಯದ ನಾಗಪಟ್ಟಣಂ ಜಿಲ್ಲೆಯ ಸೀರ್ಕಾಜಿ ಪ್ರದೇಶಕ್ಕೆ ಭೇಟಿ ನೀಡಿ ಮಳೆ ಪೀಡಿತ ಪ್ರದೇಶಗಳನ್ನು ಪರಿಶೀಲಿಸಿರುವುದಾಗಿ ತಿಳಿಸಿದರು. ಇಂದು ರಾತ್ರಿ ನಾನು ಸೀರ್ಕಾಳಿ ಮತ್ತು ಮೈಲಾದುತುರೈ ಮತ್ತು ಕಡಲೂರು ಪ್ರದೇಶಗಳಿಗೆ ತಪಾಸಣೆ ಮಾಡಲು ಹೋಗುತ್ತಿದ್ದೇನೆ ಎಂದು ಅವರು ಹೇಳಿದರು.

ಇದಕ್ಕೂ ಮುನ್ನ ನವೆಂಬರ್ 11 ರಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೊರಡಿಸಿದ ಮಳೆಯ ಮುನ್ಸೂಚನೆ ಪ್ರಕಾರ ತಿರುವಳ್ಳೂರು, ಶಿವಗಂಗಾ, ಮಧುರೈ, ಕಾಂಚೀಪುರಂ ಮತ್ತು ದಿಂಡಿಗಲ್‌ನಲ್ಲಿರುವ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಯಿತು. ನಾಳೆಯ ಮಳೆಯ ಮುನ್ಸೂಚನೆಯ ಆಧಾರದ ಮೇಲೆ ತಿರುವಳ್ಳೂರು ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ ಎಂದು ತಿರುವಳ್ಳೂರು ಜಿಲ್ಲಾಧಿಕಾರಿ ಟ್ವೀಟ್ ಮಾಡಿದ್ದಾರೆ

Spread the love

Related Articles

Leave a Reply

Your email address will not be published. Required fields are marked *

Back to top button