Breaking NewsLatestರಾಷ್ಟ್ರೀಯವಿದೇಶಸುದ್ದಿ
ಬಾಲಿಯಲ್ಲಿ ಪ್ರಧಾನಿ ಮೋದಿಯವರಿಂದ ಬ್ರಿಟನ್ ಪ್ರಧಾನಿ ರಿಷಿ ಸುನಾಕ್ ಭೇಟಿ

ಪ್ರಧಾನಿ ನರೇಂದ್ರ ಮೋದಿಯವರು ಇಂಡೋನೇಷಿಯಾದ ಬಾಲಿಯಲ್ಲಿ ನಡೆಯುತ್ತಿರುವ ಜಿ 20 ನಾಯಕರ ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದು, ಈ ವೇಳೆ ಇತ್ತೀಚೆಗಷ್ಟೇ ಬ್ರಿಟನ್ ಪ್ರಧಾನಿಯಾಗಿ ಆಯ್ಕೆಯಾಗಿರುವ ರಿಷಿ ಸುನಾಕ್ ಅವರನ್ನು ಭೇಟಿಯಾಗಿದ್ದಾರೆ.
ಇನ್ಫೋಸಿಸ್ ನಾರಾಯಣ ಮೂರ್ತಿ ಸುಧಾ ಮೂರ್ತಿ ದಂಪತಿಯ ಪುತ್ರಿ ಅಕ್ಷತಾ ಅವರನ್ನು ವಿವಾಹವಾಗಿರುವ ರಿಷಿ ಸುನಾಕ್, ಭಾರತೀಯ ಮೂಲದವರಾಗಿದ್ದು ಅವರ ಆಯ್ಕೆಯನ್ನು ಭಾರತೀಯರು ಸಂಭ್ರಮಿಸಿದ್ದರು.
ಇದೀಗ ರಿಷಿ ಸುನಾಕ್ ಆಯ್ಕೆಯಾದ ಬಳಿಕ ಪ್ರಧಾನಿ ನರೇಂದ್ರ ಮೋದಿಯವರು ಇಂದು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ಇಬ್ಬರು ನಾಯಕರ ಭೇಟಿಯ ಫೋಟೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
