Breaking NewsLatestರಾಷ್ಟ್ರೀಯಸುದ್ದಿ

ಇಂದಿರಾ ಗಾಂಧಿ ಜನ್ಮದಿನದಂದು ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಜತೆ ಮಹಿಳೆಯರು ಮಾತ್ರ ಭಾಗಿ

ಅಕೋಲಾ: ನವೆಂಬರ್ 19ರಂದು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನದ ಸಂದರ್ಭದಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ಮಹಿಳೆಯರು ಮಾತ್ರ ನಡೆಯಲಿದ್ದಾರೆ ಎಂದು ಪಕ್ಷದ ಹಿರಿಯ ನಾಯಕ ಜೈರಾಮ್ ರಮೇಶ್ ಗುರುವಾರ ಹೇಳಿದ್ದಾರೆ.

ಭಾರತ್ ಜೋಡೋ ಯಾತ್ರೆಯು ಮಹಾರಾಷ್ಟ್ರದ ಮೂಲಕ ಹಾದುಹೋಗುತ್ತಿದೆ. ನಾಂದೇಡ್​​ನಿಂದ ಪಾದಯಾತ್ರೆ ಆರಂಭವಾಗಿ ಹಿಂಗೋಲಿ ಮತ್ತು ವಾಶಿಮ್ ಜಿಲ್ಲೆಗಳಿಗೆ ಆಗಮಿಸಿತ್ತು. ಇದೀಗ ಅಕೋಲಾ ಮತ್ತು ಬುಲ್ಧಾನ ಜಿಲ್ಲೆಗಳಿಗೂ ಬರಲಿದೆ. ನವೆಂಬರ್ 20 ರಂದು ಮಧ್ಯಪ್ರದೇಶಕ್ಕೆ ಬರಲಿದೆ.

ನವೆಂಬರ್ 19ರಂದು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನದ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ಅಕೋಲಾ ಜಿಲ್ಲೆಯ ವಡೆಗಾಂವ್​​ದಿಂದ ಮಹಿಳೆಯರು ಮಾತ್ರ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪಕ್ಷದ ಸಂವಹನ ಮತ್ತು ಪ್ರಚಾರ ವಿಭಾಗದ ಉಸ್ತುವಾರಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಮೇಶ್ ಸುದ್ದಿಗಾರರಿಗೆ ತಿಳಿಸಿದರು.

Spread the love

Related Articles

Leave a Reply

Your email address will not be published. Required fields are marked *

Back to top button