Breaking NewsLatestಜಿಲ್ಲಾ ಸುದ್ದಿಬೆಂಗಳೂರುರಾಜ್ಯಸುದ್ದಿ
ಶೂಟಿಂಗ್ ವೇಳೆ ನಟ ಉಪೇಂದ್ರ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಬೆಂಗಳೂರು: ಚಿತ್ರೀಕರಣವೊಂದರಲ್ಲಿ ತೊಡಗಿದ್ದಂತ ರಿಯಲ್ ಸ್ಟಾರ್ ಉಪೇಂದ್ರ ಅವರು ಡಸ್ಟ್ ಅಲರ್ಜಿಯಿಂದ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರೋದಾಗಿ ತಿಳಿದು ಬಂದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಬಳಿಯಲ್ಲಿ ಇಂದು ನಟ ಉಪೇಂದ್ರ ಶೂಟಿಂಗ್ ನಲ್ಲಿ ತೊಡಗಿದ್ದರು.
ಈ ವೇಳೆ ಅಲ್ಲಿ ಉಂಟಾದಂತ ದೂಳಿನಿಂದಾಗಿ ಡಸ್ಟ್ ಅಲರ್ಜಿಗೊಂಡು, ಅಸ್ವಸ್ಥರಾಗಿದ್ದರು ಎಂದು ತಿಳಿದು ಬಂದಿದೆ.
ನಟ ಉಪೇಂದ್ರ ಅವರನ್ನು ಕೂಡಲೇ ಸಮೀಪದ ಹರ್ಷ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿರೋದಾಗಿ ತಿಳಿದು ಬಂದಿದೆ. ವೈದ್ಯರಿಂದ ಚಿಕಿತ್ಸೆ ಪಡೆದ ಬಳಿಕ, ನಟ ಉಪೇಂದ್ರ ಮತ್ತೆ ಶೂಟಿಂಗ್ ನಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ.
