Breaking NewsLatestರಾಷ್ಟ್ರೀಯಸುದ್ದಿ

ಮಹಿಳೆಯರು ಏನೂ ಧರಿಸದಿದ್ರೂ ಚೆನ್ನಾಗಿಯೇ ಕಾಣ್ತಾರೆ: ರಾಮ್‌ದೇವ್‌ ವಿವಾದಾತ್ಮಕ ಹೇಳಿಕೆ

ಮಹಿಳೆಯರು ಸೀರೆಯಲ್ಲಿ ಚೆನ್ನಾಗಿ ಕಾಣುತ್ತಾರೆ, ಮಹಿಳೆಯರು ಸಲ್ವಾರ್​ನಲ್ಲಿಯೂ ಚೆನ್ನಾಗಿ ಕಾಣುತ್ತಾರೆ. ನನ್ನ ದೃಷ್ಟಿಯಲ್ಲಿ ಅವರು ಏನನ್ನೂ ಧರಿಸದಿದ್ದರೂ ಚೆನ್ನಾಗಿಯೇ ಕಾಣುತ್ತಾರೆ ಎಂದು ಯೋಗ ಗುರು ರಾಮದೇವ್ ಹೇಳಿದ್ದಾರೆ.

ಈ ವೇಳೆ ವೇದಿಕೆಯಲ್ಲಿ ಅವರ ಪಕ್ಕದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಪತ್ನಿ ಅಮೃತಾ ಫಡ್ನವಿಸ್ ಕೂಡ ಇದ್ದರು.

ರಾಮದೇವ್ ಹೇಳಿಕೆಯಿಂದ ವೇದಿಕೆಯಲ್ಲಿದ್ದವರು ಮುಜುಗರಕ್ಕೀಡಾಗಿದ್ದಾರೆ. ರಾಮ್‌ದೇವ್‌ ಅವರ ಈ ವಿವಾದಾತ್ಮಕ ಹೇಳಿಕೆ ಸಾಕಷ್ಟು ಟ್ರೋಲ್‌ ಆಗಿದೆ.

ಪತಂಜಲಿ ಯೋಗಪೀಠ ಮತ್ತು ಮುಂಬೈ ಮಹಿಳಾ ಪತಂಜಲಿ ಯೋಗ ಸಮಿತಿ ಥಾಣೆಯಲ್ಲಿ ಆಯೋಜಿಸಿದ್ದ ಯೋಗ ವಿಜ್ಞಾನ ಶಿಬಿರ ಮತ್ತು ಮಹಿಳಾ ಸಭೆಯಲ್ಲಿ ಪಾಲ್ಗೊಂಡಿದ್ದ ರಾಮ್‌ದೇವ್ ಈ ಅಸಂಬದ್ಧ ಹೇಳಿಕೆ ನೀಡುವ ಮೂಲಕ ಅನೇಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಅವರ ಹೇಳಿಕೆಯ ವೀಡಿಯೊ ಹಂಚಿಕೊಂಡು ಟ್ರೋಲ್ ಮಾಡಲಾಗುತ್ತಿದೆ.

ಕಾರ್ಯಕ್ರಮದಲ್ಲಿ ಮಹಿಳೆಯರು ಯೋಗಕ್ಕಾಗಿ ಉಡುಪುಗಳನ್ನು ತಂದಿದ್ದರು. ಕೆಲವರು ಸೀರೆಯುಟ್ಟು ಬಂದಿದ್ದರು. ಕೆಲವರಿಗೆ ಯೋಗದ ಬಳಿಕ ಸೀರೆಯುಡಲು ಸಮಯ ಆಗಿರಲಿಲ್ಲವಾದ್ದರಿಂದ ಯೋಗದ ಡ್ರೆಸ್​ನಲ್ಲೇ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು ಈ ಹಿನ್ನೆಲೆಯಲ್ಲಿ ಮಾತನಾಡಿದ ರಾಮದೇವ್, ಮಹಿಳೆಯರು ಸೀರೆಯಲ್ಲಿ ಚೆನ್ನಾಗಿ ಕಾಣುತ್ತಾರೆ, ಸಲ್ವಾರ್ ಸೂಟ್‌ನಲ್ಲಿಯೂ ಚೆನ್ನಾಗಿ ಕಾಣುತ್ತಾರೆ. ನನ್ನ ದೃಷ್ಟಿಯಲ್ಲಿ ಅವರು ಏನನ್ನೂ ಧರಿಸದಿದ್ದರೂ ಚೆನ್ನಾಗಿಯೇ ಕಾಣುತ್ತಾರೆ ಎಂದಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button