ಇನ್ಮುಂದೆ ʼವಾಹನಗಳ ಮೇಲೆ ದಂಡ ಬಾಕಿಯಿದ್ರೆ ಇನ್ಶೂರೆನ್ಸ್ ಕ್ಯಾನ್ಸಲ್ʼ

ಬೆಂಗಳೂರು : ಸಿಲಿಕಾನ್ ಸಿಟಿಯ ವಾಹನ ಸವಾರರೇ ಎಚ್ಚರ.! ಇನ್ಮುಂದೆ ವಾಹನಗಳ ಮೇಲೆ ದಂಡ ಬಾಕಿಯಿದ್ರೆ ಸಿಗಲ್ಲ ಇನ್ಶೂರೆನ್ಸ್ ಕ್ಯಾನ್ಸಲ್ ಆಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ. ಒಂದೆಡೆ ದಿನದಿಂದ ದಿನಕ್ಕೆ ವಾಹನ ಸಂಖ್ಯೆ ಹೆಚ್ಚಾಗ್ತಿದ್ದಂತೆ ನಿಯಮ ಉಲ್ಲಂಘನೆ ಕೇಸ್ ಹೆಚ್ಚಾಗುತ್ತಿದೆ ಈ ಬೆಂಗಳೂರಿನಲ್ಲಿ ಪ್ರತಿದಿನ ಸುಮಾರು 30 ಸಾವಿರಕ್ಕೂ ಹೆಚ್ಚು ಟ್ರಾಫಿಕ್ ಕೇಸ್‌ಗಳು ದಾಖಲಾಗುತ್ತಿವೆ.
ಕಳೆದ 11 ತಿಂಗಳಲ್ಲಿ ಬೆಂಗಳೂರಿನಲ್ಲಿ 96 ಲಕ್ಷ ಸಂಚಾರ ನಿಯಮ ಉಲ್ಲಂಘನೆ ಕೇಸ್ ದಾಖಲಾಗಿದೆ.
11 ತಿಂಗಳಲ್ಲಿ ಬರೋಬ್ಬರಿ 164 ಕೋಟಿ ರೂ. ದಂಡದ ಮೊತ್ತ ವಸೂಲಿ ಮಾಡಲಾಗಿದೆ. ವರ್ಷಾಂತ್ಯಕ್ಕೆ ಒಂದು ಕೋಟಿ ಕೇಸ್ ಆಗುತ್ತದೆ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ದೇಶದ ಯಾವ ನಗರದಲ್ಲೂ 1 ಕೋಟಿ ಕೇಸ್ ಹಾಕಿದ ಉದಾಹರಣೆ ಇಲ್ವಂತೆ. ಬೆಂಗಳೂರು ನಗರ ಒಂದರಲ್ಲೇ ಇಷ್ಟು ಕೇಸ್ ದಾಖಲಾಗುತ್ತಿದೆ. ಸಂಚಾರ ದಟ್ಟಣೆಯಲ್ಲಿ ಹೆಸರುವಾಸಿಯಾಗಿದ್ದ ಸಿಲಿಕಾನ್ ಸಿಟಿ ಈಗ ಸಂಚಾರ ನಿಯಮ ಉಲ್ಲಂಘನೆ ಹಾಗೂ ದಂಡ ಕಟ್ಟುವಲ್ಲೂ ರೆಕಾರ್ಡ್ ಮಾಡುತ್ತಿದೆ.
ಇದರಿಂದಾಗಿ ವಾಹನ ಸಂಖ್ಯೆ ಹೆಚ್ಚಾಗ್ತಿದ್ದಂತೆ ಸಂಚಾರ ನಿರ್ವಹಣೆ ಕೂಡ ಪೊಲೀಸರಿಗೆ ಬಹುದೊಡ್ಡ ಸವಾಲಾಗಿ ಪರಿಣಮಿಸುತ್ತದೆ. ನಿಯಮ ಉಲ್ಲಂಘನೆ ಮಾಡೋದನ್ನು ಕಡಿವಾಣ ಹಾಕುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಮಾಸ್ಟರ್ ಪ್ಲ್ಯಾನ್ ಮಾಡಿದ್ದು, ಐಟಿಎಂ (ITM) ಸಿಸ್ಟಮ್ ಬಳಕೆಗೆ ಮುಂದಾಗಿದೆ.
