Breaking NewsLatestಸುದ್ದಿ

ತಮಿಳು ನಟ ʻಶರತ್ ಕುಮಾರ್ʼ ಆರೋಗ್ಯದಲ್ಲಿ ಏರುಪೇರು, ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲು

ಚೆನ್ನೈ: ತಮಿಳಿನ ಖ್ಯಾತ ನಟ ಶರತ್ ಕುಮಾರ್ ಅಸ್ವಸ್ಥರಾಗಿದ್ದು, ತಕ್ಷಣವೇ ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಎರಡು ದಿನಗಳಿಂದ ಶರತ್ ನಿರ್ಜಲೀಕರಣದಿಂದ ಬಳಲುತ್ತಿದ್ದರಂತೆ.

ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾಗ ಅಸ್ವಸ್ಥರಾಗಿದ್ದರು. ಆಸ್ಪತ್ರೆಗೆ ಕರೆದೊಯ್ದಾಗ ಭೇದಿಯಿಂದ ನಿರ್ಜಲೀಕರಣವಾಗಿದೆ ಎಂದು ವೈದ್ಯರು ತಿಳಿಸಿದ್ದು, ವೈದ್ಯರು ಶರತ್‌ಗೆ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಶರತ್ ಅವರ ಪತ್ನಿ ಜನಪ್ರಿಯ ನಟಿ ರಾಧಿಕಾ ಹಾಗೂ ಪುತ್ರಿ ವರಲಕ್ಷ್ಮಿ ಶರತ್ ಕುಮಾರ್ ಆಸ್ಪತ್ರೆಯಲ್ಲಿದ್ದಾರೆ. ಈ ಮಾಹಿತಿ ತಿಳಿದ ಕಾಲಿವುಡ್ ಸೆಲೆಬ್ರಿಟಿಗಳು ಶರತ್ ಕುಮಾರ್ ಅವರನ್ನು ಭೇಟಿ ಆಸ್ಪತ್ರೆಯತ್ತ ಧಾವಿಸುತ್ತಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button