‘ಕಾಂತಾರ ಕ್ಲೈಮ್ಯಾಕ್ಸ್ ನೋಡಿ ರೋಮಾಂಚನ ಆಯ್ತು’; ರಿಷಬ್ ಶೆಟ್ಟಿ ಚಿತ್ರಕ್ಕೆ ಹೃತಿಕ್ ರೋಷನ್ ಮೆಚ್ಚುಗೆ

ದೇಶಾದ್ಯಂತ ಹೊಸ ಸಂಚಲನ ಮೂಡಿಸಿದ ‘ಕಾಂತಾರ’ ಚಿತ್ರದ ಬಗ್ಗೆ ಈಗಾಗಲೇ ಅನೇಕ ಸೆಲೆಬ್ರಿಟಿಗಳು ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.
ಭಾಷೆಗಳ ಗಡಿ ಮೀರಿ ಈ ಚಿತ್ರ ಯಶಸ್ಸು ಕಂಡಿದೆ. ರಿಷಬ್ ಶೆಟ್ಟಿ ಅವರ ನಟನೆ ಮತ್ತು ನಿರ್ದೇಶನಕ್ಕೆ ಸಿನಿಪ್ರಿಯರು ಫಿದಾ ಆಗಿದ್ದಾರೆ. ಚಿತ್ರಮಂದಿರದಲ್ಲಿ ಅಬ್ಬರಿಸಿದ ‘ಕಾಂತಾರ’ ಈಗ ಒಟಿಟಿಯಲ್ಲೂ ಸದ್ದು ಮಾಡುತ್ತಿದೆ. ನೆಟ್ಫ್ಲಿಕ್ಸ್ ಮೂಲಕ ಈ ಚಿತ್ರದ ಹಿಂದಿ ವರ್ಷನ್ ವೀಕ್ಷಣೆಗೆ ಲಭ್ಯವಾಗಿದೆ. ಬಾಲಿವುಡ್ನ ಖ್ಯಾತ ನಟ ಹೃತಿಕ್ ರೋಷನ್ ಅವರು ಕೂಡ ಕಾಂತಾರ
ನೋಡಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಅವರಿಗೆ ಚಿತ್ರದ ಕ್ಲೈಮ್ಯಾಕ್ಸ್ ಸಖತ್ ಇಷ್ಟ ಆಗಿದೆ. ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
‘ಕಾಂತಾರ ಸಿನಿಮಾವನ್ನು ನೋಡಿ ಸಾಕಷ್ಟು ವಿಷಯ ಕಲಿತುಕೊಂಡೆ. ರಿಷಬ್ ಶೆಟ್ಟಿ ಅವರಿಂದಾಗಿ ಈ ಸಿನಿಮಾ ಅಸಾಧಾರಣ ಎನಿಸಿಕೊಂಡಿದೆ. ನಿರೂಪಣೆ, ನಟನೆ ಮತ್ತು ನಿರ್ದೇಶನ ಅತ್ಯುತ್ತಮವಾಗಿದೆ. ಕ್ಲೈಮ್ಯಾಕ್ಸ್ನಲ್ಲಿ ಕಂಡ ಬದಲಾವನೆಯಿಂದ ನನಗೆ ರೋಮಾಂಚನ ಆಯಿತು. ಇಡೀ ತಂಡಕ್ಕೆ ನನ್ನ ಗೌರವ ಮತ್ತು ಅಭಿನಂದನೆಗಳು’ ಎಂದು ಹೃತಿಕ್ ರೋಷನ್ ಪೋಸ್ಟ್ ಮಾಡಿದ್ದಾರೆ.
