Breaking NewsLatestಬೆಂಗಳೂರುರಾಜ್ಯಸುದ್ದಿ

ಕ್ರಿಕೆಟ್‌ ನನಗೆ ಇನ್ನೊಂದು ಅವಕಾಶ ಕೊಡು: ಕರುಣ್ ನಾಯರ್ ಟ್ವೀಟ್ ಚರ್ಚೆಗೆ ಗ್ರಾಸ

ಬೆಂಗಳೂರು: ‘ಪ್ರಿಯ ಕ್ರಿಕೆಟ್, ನನಗೆ ಇನ್ನೊಂದು ಅವಕಾಶ ಕೊಡು’-

ಕರ್ನಾಟಕ ಕ್ರಿಕೆಟ್ ತಂಡದ ಆಟಗಾರ ಕರುಣ್ ನಾಯರ್ ಅವರು ಮಾಡಿರುವ ಈ ಟ್ವೀಟ್ ಈಗ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಶನಿವಾರ ಪ್ರಕಟಿಸಲಾದ ಕರ್ನಾಟಕ ಕ್ರಿಕೆಟ್ ತಂಡದಲ್ಲಿ ಅವರಿಗೆ ಸ್ಥಾನ ಲಭಿಸಿಲ್ಲ.

ಕಳೆದ ಕೆಲವು ಕಾಲದಿಂದ ಅವರು ಫಾರ್ಮ್ ಕಳೆದುಕೊಂಡಿದ್ದಾರೆ. ಆದ್ದರಿಂದ ಅವರಿಗೆ ಈಚೆಗೆ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಮತ್ತು ವಿಜಯ್ ಹಜಾರೆ ಟ್ರೋಫಿ ಟೂರ್ನಿಗಳಿಗೂ ಪರಿಗಣಿಸಿರಲಿಲ್ಲ.

ಆದರೆ ರಣಜಿ ಟೂರ್ನಿಯಲ್ಲಿ ಆಡುವ ಕರ್ನಾಟಕದ ಸಂಭವನೀಯರ ತಂಡದಲ್ಲಿ ಅವರಿಗೆ ಸ್ಥಾನ ಕಲ್ಪಿಸಲಾಗಿತ್ತು. ಅಂತಿಮ ಪಟ್ಟಿಯಲ್ಲಿ ಕೈಬಿಡಲಾಗಿದೆ. ಉದಯೋನ್ಮುಖ ಆಟಗಾರರಿಗೆ ಅವಕಾಶ ನೀಡಲಾಗಿದೆ.

ಇದರ ಬೆನ್ನಲ್ಲೇ ಕರುಣ್ ಈ ಟ್ವೀಟ್ ಮಾಡಿದ್ದಾರೆ.

ಟೆಸ್ಟ್ ಕ್ರಿಕೆಟ್‌ನಲ್ಲಿ ತ್ರಿಶತಕ ದಾಖಲಿಸಿದ ಭಾರತದ ಎರಡನೇ ಆಟಗಾರನೆಂಬ ಹೆಗ್ಗಳಿಕೆ ಕರುಣ್ ಅವರದ್ದು.

ಕರ್ನಾಟಕದ ಪರವಾಗಿ 85 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದಾರೆ. 5922 ರನ್‌ ಗಳಿಸಿದ್ದಾರೆ. 15 ಶತಕ ಹಾಗೂ 27 ಅರ್ಧಶತಕಗಳು ಅದರಲ್ಲಿ ಸೇರಿವೆ. 31 ವರ್ಷದ ಕಳೆದ ಬಾರಿಯ ರಣಜಿ ಟೂರ್ನಿಯ ಕ್ವಾರ್ಟರ್‌ಫೈನಲ್‌ನಲ್ಲಿ ಅವರು ಆಡಿದ್ದರು.

Spread the love

Related Articles

Leave a Reply

Your email address will not be published. Required fields are marked *

Back to top button