ಕೋಲಾರ

ಕೌಟುಂಬಿಕ ಕಲಹ; ಎರಡು ವರ್ಷದ ಮಗುವಿನೊಂದಿಗೆ ತಾಯಿ ಆತ್ಮಹತ್ಯೆ

ಕೋಲಾರ: ಕೌಟುಂಬಿಕ ಕಲಹ ಹಿನ್ನಲೆ ತಾಯಿ ತನ್ನ ಎರಡು ವರ್ಷದ ಮಗುವಿನೊಂದಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರದಲ್ಲಿ ನಡೆದಿದೆ.

ಕೋಲಾರ ತಾಲೂಕಿನ ಚಿನ್ನಾಪುರ ಗ್ರಾಮದಲ್ಲಿ ವಾಸವಿದ್ದ 22ವರ್ಷದ ಭವಾನಿ ತನ್ನ ಗಂಡ ಹರೀಶ್ ಮತ್ತೊಬ್ಬಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಹಿನ್ನೆಲೆಯಲ್ಲಿ ಮನನೊಂದು ಸಂಜೆ ಮನೆಯಲ್ಲಿ ತನ್ನ ಎರಡು ವರ್ಷದ ಮಗುವಿನೊಂದಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸ್ಥಳೀಯರು ತಕ್ಷಣ ಆಕೆಯನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದು ಚಿಕಿತ್ಸೆ ಫಲಕಾಯಾಗದೆ ತಾಯಿ ಮಗು ಇಬ್ಬರೂ ಮೃತಪಟ್ಟಿದ್ದಾರೆ. ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button