Breaking News

ರಮೇಶಣ್ಣ ದಿಲ್ಲಿಯಿಂದ ಬಂದಿದ್ದಾರೆ, ಏನನ್ನೋದನ್ನು ಎರಡು ದಿನದಲ್ಲಿ ಹೇಳ್ತೇವೆ: ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ : ಸಚಿವ ಸ್ಥಾನಕ್ಕೆ ಸಂಬಂಧಿಸಿದಂತೆ ಮಾಧ್ಯಮ ವರದಿಗಳಲ್ಲಿ ಸತ್ಯಾಂಶವಿಲ್ಲ. ರಮೇಶ್ ಜಾರಕಿಹೊಳಿ ಅವರನ್ನೇ ಸಚಿವರನ್ನಾಗಿ ಮಾಡಲು ನಾವೆಲ್ಲ ಪ್ರಯತ್ನಿಸುತ್ತಿದ್ದೇವೆ. ದೆಹಲಿಯಿಂದ ಬೆಂಗಳೂರಿಗೆ ಬಂದಿರುವ ಸಹೋದರ ರಮೇಶ್ ಎರಡು ದಿನದಲ್ಲಿ ಬೆಳಗಾವಿಗೆ ಆಗಮಿಸುವ ನಿರೀಕ್ಷೆ ಇದೆ. ಆ ನಂತರ ಮಾಧ್ಯಮಗಳಿಗೆ ಈ ಕುರಿತು ಮಾಹಿತಿ ನೀಡುತ್ತೇವೆ. ಎಲ್ಲ ಗೊಂದಲಗಳಿಗೂ ತೆರೆ ಎಳೆಯುತ್ತೇವೆ ಎಂದು ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು

ಗೋಕಾಕದಲ್ಲಿ ಸುದ್ದಿಗಾರರೊಂದಿಗೆ ಅವರು, ಸಹೋದರನಿಗೆ ಸಚಿವ ಸ್ಥಾನ ನೀಡಬೇಕೆಂದು ರಮೇಶ್ ಜಾರಕಿಹೊಳಿ ಪಟ್ಟು ಹಿಡಿದಿರುವ ವಿಚಾರ ಮಾಧ್ಯಮಗಳಿಂದಲೇ ಗೊತ್ತಾಯಿತು. ಮಾಧ್ಯಮಗಳಲ್ಲಿ ಬರುತ್ತಿರುವ ಇಂತಹ ಸುದ್ದಿಗಳಲ್ಲಿ ಸತ್ಯಾಂಶವಿಲ್ಲ. ರಮೇಶ್ ಜಾರಕಿಹೊಳಿ ಅವರನ್ನೇ ಸಚಿವರನ್ನಾಗಿ ಮಾಡಲು ನಾವೆಲ್ಲ ಪ್ರಯತ್ನಿಸುತ್ತಿದ್ದೇವೆ. ದೆಹಲಿಯಿಂದ ಬೆಂಗಳೂರಿಗೆ ಬಂದಿರುವ ಸಹೋದರ ರಮೇಶ್ ಎರಡು ದಿನದಲ್ಲಿ ಬೆಳಗಾವಿಗೆ ಆಗಮಿಸುವ ನಿರೀಕ್ಷೆ ಇದೆ. ಆ ನಂತರ ಮಾಧ್ಯಮಗಳಿಗೆ ಈ ಕುರಿತು ಜಂಟಿಯಾಗಿಯೇ ಮಾಹಿತಿ ನೀಡುತ್ತೇವೆ. ಎಲ್ಲ ಗೊಂದಲಗಳಿಗೂ ತೆರೆ ಎಳೆಯುತ್ತೇವೆ, ಅಲ್ಲಿಯವರೆಗೂ ಸುಮ್ಮನಿರಬೇಕು ಎಂದರು.

ಒಟ್ಟಿನಲ್ಲಿ ದೆಹಲಿಗೆ ಹೋಗಿ ವರಿಷ್ಠರನ್ನು ಭೇಟಿ ಮಾಡಿ ಬಂದಿರುವ ಶಾಸಕ ರಮೇಶ ಜಾರಕಿಹೊಳಿ ಯಾವ ಸುದ್ದಿ ತಂದಿದ್ದಾರೆ? ದೆಹಲಿ ಭೇಟಿಯ ಫಲಶೃತಿ ಏನು ಎಂಬುದು ಅವರು ಬೆಳಗಾವಿಗೆ ಬಂದ ನಂತರವೇ ಗೊತ್ತಾಗಲಿದೆ ಎಂದು ಬಾಲಚಂದ್ರ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button