ಜಿಲ್ಲಾ ಸುದ್ದಿಬಾಗಲಕೋಟೆ
ಬಂಜಾರಾ ಸಮಾಜಕ್ಕೆ ಸರ್ಕಾರ ದ್ರೋಹ; ಶಕ್ತಿಪೀಠದ ಕುಮಾರ ಮಹಾರಾಜ ಅಸಮಾಧಾನ

ಬಾಗಲಕೋಟೆ: ತಾಂಡಾ ಅಭಿವೃದ್ಧಿ ನಿಗಮಕ್ಕೆ ಅನುದಾನ ನೀಡುವಲ್ಲಿ ತಾರತಮ್ಯ ಮಾಡುವ ಮೂಲಕ ರಾಜ್ಯ ಸರ್ಕಾರ ಬಂಜಾರಾ ಸಮಾಜಕ್ಕೆ ದ್ರೋಹ ಬಗೆಯುತ್ತಿದೆ ಎಂದು ನೀಲಾನಗರದ ಶಕ್ತಿ ಪೀಠದ ಕುಮಾರ ಮಹಾರಾಜರು ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಬಾಗಲಕೋಟೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರ ಬಂಜಾರಾ ಅಭಿವೃದ್ಧಿ ನಿಗಮಕ್ಕೆ ಹೆಚ್ಚಿನ ಅನುದಾನ ಕೊಡಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ತಾಂಡಾ ಅಭಿವೃದ್ಧಿ ನಿಗಮಕ್ಕೆ ಕೇವಲ 50ಕೋಟಿ ಅನುದಾನ ಕೊಟ್ಟಿದ್ದಾರೆ. ಆದರೆ ಬೇರೆ ಸಮಾಜದ ನಿಗಮಕ್ಕೆ 500ಕೋಟಿ ಕೊಡುತ್ತಾರೆ. ನಮ್ಮ ಸಮಾಜಕ್ಕೆ ತಾರತಮ್ಯ ಮಾಡಲಾಗುತ್ತಿದೆ ಎಂದರು.




