Breaking NewsLatestರಾಷ್ಟ್ರೀಯ

ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ್​​​​​​​​​ ಸಿಂಗ್​​ ಆರೋಗ್ಯ ಸ್ಥಿತಿ ಗಂಭೀರ

ಲಕ್ನೋ : ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರಿಗೆ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ಅವರನ್ನು ಲಕ್ನೋದ ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿದೆ.

ಇನ್ನು ಮಾಜಿ ಸಿಎಂ ಕಲ್ಯಾಣ್ ಸಿಂಗ್ ಆರೋಗ್ಯ ಹದಗೆಟ್ಟಿದೆ ಎಂಬ ಮಾಹಿತಿ ಸಿಕ್ಕ ಬೆನ್ನಲ್ಲೇ ಉತ್ತರ ಪ್ರದೇಶದ ಹಾಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ.

ಕಳೆದ ಎರಡು ವಾರಗಳಿಂದ ಆರೋಗ್ಯ ಸಮಸ್ಯೆ ಎದುರಾಗುತ್ತಿದೆ. ಅವರನ್ನು ಶನಿವಾರ ಲಕ್ನೋದ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ರವಿವಾರ ಸಂಜೆ ಅವರನ್ನು ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಯಿತು.

Spread the love

Related Articles

Leave a Reply

Your email address will not be published. Required fields are marked *

Back to top button