Breaking NewsLatest

ದ್ವಿತೀಯ ಪಿಯುಸಿ ರಿಪೀಟರ್ಸ್​​​ಗೆ ಗುಡ್​​ ನ್ಯೂಸ್ : ಪರೀಕ್ಷೆ ಇಲ್ಲದೆ ಎಲ್ಲರೂ ಪಾಸ್

ಬೆಂಗಳೂರು : ಕಳೆದ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿಯ ಎಲ್ಲಾ ವಿದ್ಯಾರ್ಥಿಗಳನ್ನ ತೇರ್ಗಡೆ ಮಾಡುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ಈಗ ನಿರೀಕ್ಷೆಯಂತೆ ಪಿಯುಸಿ ರಿಪೀಟರ್ಸ್ ವಿದ್ಯಾರ್ಥಿಗಳಿಗೂ ಅದೇ ಸಿಹಿ ಸುದ್ದಿ ಇದೆ. ದ್ವಿತೀಯ ಪಿಯುಸಿ ಮರು ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳು ಕೂಡ ಪರೀಕ್ಷೆ ಇಲ್ಲದೇ ಪಾಸ್ ಮಾಡಲಿದೆ ಎಂದು ಹೈಕೋರ್ಟ್ ಗೆ ರಾಜ್ಯ ಸರ್ಕಾರ ತಿಳಿಸಿದೆ.

ಶೇ.35ರಷ್ಟು ಅಂಕಗಳನ್ನು ನೀಡುವ ಮೂಲಕ, ದ್ವಿತೀಯ ಪಿಯು ರಿಪೀಟರ್ಸ್ ಎಲ್ಲಾ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗುತ್ತದೆ. ಶೇ.35ರಷ್ಟು ಅಂಕ ನೀಡಿ ಪಾಸ್ ಮಾಡುವುದಕ್ಕೆ ನಿರ್ಧರಿಸಲಾಗಿದೆ ಎಂಬುದಾಗಿ ತಮ್ಮ ನಿರ್ಧಾರವನ್ನು ತಿಳಿಸಿದೆ. ಹೀಗಾಗಿ ದ್ವಿತೀಯ ಪಿಯು ರಿಪೀಟರ್ಸ್ ಎಲ್ಲಾ ವಿದ್ಯಾರ್ಥಿಗಳು ಕೂಡ ಪರೀಕ್ಷೆ ಇಲ್ಲದೇ ಪಾಸ್ ಮಾಡಲಿದೆ.

ಈ ಮೊದಲು ಸರ್ಕಾರ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಗ್ರೇಡ್ ನೀಡೋ ಮೂಲಕ ಪಾಸ್ ಮಾಡಲು ನಿರ್ಧರಿಸಿತ್ತು. ಬಳಿಕ ವಿದ್ಯಾರ್ಥಿಗಳ ಭವಿಷ್ಯದ ದೃಷ್ಠಿಯಿಂದ ಅಂಕಗಳನ್ನು ನೀಡಲಾಗುತ್ತದೆ ಎಂಬುದಾಗಿ ಪ್ರಕಟಿಸಿತ್ತು. ದ್ವಿತೀಯ ಪಿಯು ಎಲ್ಲಾ ವಿದ್ಯಾರ್ಥಿಗಳನ್ನು ಪಾಸ್ ಮಾಡಲು ನಿರ್ಧರಿಸಿರಲಿಲ್ಲ. ಇದರಿಂದಾಗಿ ರಿಪೀಟರ್ಸ್ ವಿದ್ಯಾರ್ಥಿಗಳ ಪೋಷಕರು, ವಿದ್ಯಾರ್ಥಿಗಳು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

Spread the love

Related Articles

Leave a Reply

Your email address will not be published. Required fields are marked *

Back to top button