ದೇವನಹಳ್ಳಿ: ಕಾಂಗ್ರೆಸ್ ಸೈಕಲ್ ಜಾಥಾ

ದೇವನಹಳ್ಳಿ: ಪೆಟ್ರೋಲ್, ಡೀಸೆಲ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಿಂದ ಇಂದು ಸೈಕಲ್ ಜಾಥ ನಡೆಯಿತು.
ದೇವನಹಳ್ಳಿಯ ಪ್ರವಾಸಿ ಮಂದಿರದಿಂದ ಪ್ರಾರಂಭವಾದ ಸೈಕಲ್ ಜಾಥವನ್ನು ಪೋಲಿಸರು ಪ್ರವಾಸಿ ಮಂದಿರದ ಗೇಟ್ ಗೆ ಬೀಗ ಜಡಿದು ತಡೆಯಲು ಪ್ರಯತ್ನಿಸಿದರು ಆದರೆ ನೂರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿದ್ದರಿಂದ ಪೋಲಿಸರು ಮತ್ತು ಕಾಂಗ್ರೆಸ್ ಮುಖಂಡರ ನಡುವೆ ಮಾತಿನ ಚಕಮಕಿ ನಡೆಯಿತು. ನಂತರ ಪೋಲಿಸರೇ ಗೇಟ್ ನ ಬೀಗ ತೆಗೆದು ಸೈಕಲ್ ಜಾಥಕ್ಕೆ ಅನುವು ಮಾಡಿಕೊಟ್ಟರು. ನಂತರ ಪ್ರವಾಸಿ ಮಂದಿರದಿಂದ ದೇವನಹಳ್ಳಿ ತಾಲ್ಲೂಕು ಕಛೇರಿವರೆಗೂ ಕಾಂಗ್ರೆಸ್ ಕಾರ್ಯಕರ್ತರು ಸೈಕಲ್ ಚಲಾಯಿಸುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದಾರೆ. ರೈತರು, ಸಣ್ಣ ಪುಟ್ಟ ವ್ಯಾಪಾರಸ್ಥರು, ಕೂಲಿಕಾರ್ಮಿಕರು, ಆದಾಯವಿಲ್ಲದೆ ಬದುಕು ನಡೆಸಲು ಕಷ್ಟ ಪಡುತ್ತಿದ್ದು, ಇಂತಹ ಪರಿಸ್ಥಿತಿಯಲ್ಲಿ ಜನರ ನೋವಿಗೆ ಸ್ಪಂದಿಸದೆ ಸರ್ಕಾರ ಜನರಿಗೆ ರೈತರಿಗೆ ಕೊಟ್ಟ ಭರವಸೆಗಳನ್ನು ಈಡೆರಿಸಲಾಗದೆ, ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಎಂದು, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ (ಆರ್‌ಜಿಪಿಆರ್‌ಎಸ್) ರಾಜ್ಯ ಘಟಕದ ಅಧ್ಯಕ್ಷ ಸಿ ನಾರಾಯಣ ಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.
ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸಿ ಶ್ರೀನಿವಾಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಕುಮಾರ್, ಮಾಜಿ ಶಾಸಕರಾದ ಮುನಿನರಸಿಂಹಯ್ಯ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಶಾಂತಕುಮಾರ್ ಕೆಸಿ. ಮಂಜುನಾಥ್, ವೆಂಕಟಸ್ವಾಮಿ, ಚಿನ್ನಪ್ಪ, ಯುತ್ ಕಾಂಗ್ರೇಸ್ ಅಧ್ಯಕ್ಷ ನಾಗೇಶ್, ಮತ್ತು ನೂರಾರು ಕಾಂಗ್ರೆಸ್ ಕಾರ್ಯಕರ್ತರು ಇದ್ದರು.




