ರಾಮನಗರ
ಚನ್ನಪಟ್ಟಣದಲ್ಲಿ ರೈಲಿಗೆ ಸಿಲುಕಿ ಯುವತಿ ಆತ್ಮಹತ್ಯೆ

ರಾಮನಗರ: ಯುವತಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚನ್ನಪಟ್ಟಣದ ರೈಲ್ಬೆ ನಿಲ್ದಾಣದಲ್ಲಿ ರಾತ್ರಿ ನಡೆದಿದೆ.
ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ ಶೃತಿ (28) ಎಂದು ಹೇಳಲಾಗಿದ್ದು, ಈಕೆ ಚನ್ನಪಟ್ಟಣದ ಮಂಗಳವಾರ ಪೇಟೆಯ ತಿಮ್ಮೇಗೌಡ ಎಂಬುವರ ಮಗಳು. ರಾತ್ರಿ ನಿಲ್ದಾಣದಲ್ಲಿಯೇ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಘಟನೆ ತಿಳಿಯುತಿದ್ದಂತೆ ಸ್ಥಳಕ್ಕೆ ರೈಲ್ವೆ ಪೊಲೀಸರು ಮೃತದೇಹವನ್ನು ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಿದ್ದಾರೆ.
ಸ್ವರದ್ರೂಪಿ ಯುವತಿಯಾದ ಈಕೆ ಏಕಾಎಕಿ ರೈಲ್ವೆ ನಿಲ್ದಾಣಕ್ಕೆ ಬಂದು ಈ ರೀತಿಯ ಕೃತ್ಯಕ್ಕೆ ಒಳಗಾಗಿರುವುದು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದ್ದು, ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




