ಸುಪ್ರೀಂ ಕೋರ್ಟ್‌ನಲ್ಲಿ ಇಂದು ಮಾಜಿ ಸಚಿವ ವಿನಯ್ ಕುಲಕರ್ಣಿ ಅರ್ಜಿ ವಿಚಾರಣೆ

ರನವದೆಹಲಿ: ಧಾರವಾಡದ ಹೆಬ್ಬಳ್ಳಿ ಜಿಲ್ಲಾ ಪಂಚಾಯತಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ, ಕಳೆದ ನವೆಂಬರ್ 5 ರಂದು ಬಂಧನವಾಗಿ ಸದ್ಯ ಬೆಳಗಾವಿ ಹಿಂಡಲಗಾ ಜೈಲಿನಲ್ಲಿರು ಮಾಜಿ ಸಚಿವ ವಿನಯ್ ಕುಲಕರ್ಣಿ ಅರ್ಜಿ ವಿಚಾರಣೆಯು ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ.
ಕಳೆದ ಜೂನ್ -29 ರಂದು ಮಾಜಿ ಸಚಿವ ವಿನಯ್ ಕುಲಕರ್ಣಿ ಪರವಾಗಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು, ಸುಪ್ರೀಂ ಕೋರ್ಟ್ನ ತ್ರಿಸದಸ್ಯ ಪೀಠದ ಗೌರವಾನ್ವಿತ ನ್ಯಾಯಾಧೀಶರಾದ ಎ ಎಂ ಖಾನ್ವಿಲ್ಕರ್, ದಿನೇಶ್ ಮಹೇಶ್ವರಿ, ಅನಿರುದ್ಧ ಬೋಸ್ ನೇತ್ರತ್ವದ ಪೀಠವು ವಿಚಾರಣೆಯನ್ನು ಜುಲೈ 8ಕ್ಕೆ ಮುಂದೂಡಿ ಆದೇಶ ಹೊರಡಿಸಿತು, ಅಲ್ಲದೆ ಕರ್ನಾಟಕ ಸರ್ಕಾರ ಹಾಗೂ ಸಿಬಿಐಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಮುಂದೂಡಿದನ್ನು ಇಲ್ಲಿ ಸ್ಮರಿಸಬಹುದಾಗಿ.
ಇಂದು ಸುಪ್ರೀಂಕೋರ್ಟ್ ಮುಂದೆ ವಿನಯ್ ಕುಲಕರ್ಣಿ ಪರ ವಕೀಲರು, ಕರ್ನಾಟಕ ಸರ್ಕಾರದ ಅಡ್ವೋಕೇಟ್ ಜನರಲ್ ಹಾಗೂ ಸಿಬಿಐ ಪರ ವಕೀಲರು ವಾದ ಮಂಡಿಸಲಿದ್ದಾರೆ ಎಂದು ಹೇಳಲಾಗುತ್ತಿದ್ದು, ಇದರ ಮಧ್ಯ ಈಗ ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿ ಆಪ್ತ ಕಾರ್ಯದರ್ಶಿಯಾಗಿದ್ದ ಸೋಮು ನ್ಯಾಮಗೌಡರನ್ನು ಬಂಧನ ಮಾಡಿ, ಧಾರವಾಡ ಉಪನಗರ ಠಾಣೆಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.
