ಉತ್ತರ ಕನ್ನಡ

ಅನಧಿಕೃತ ಚಿರೇಕಲ್ಲು ಕ್ವಾರಿಗಳ ಮೇಲೆ ಅಧಿಕಾರಿಗಳ ದಾಳಿ; ಯಂತ್ರೋಪಕರಣ ವಶಕ್ಕೆ

ಕಾರವಾರ : ಭಟ್ಕಳ ತಾಲೂಕಿನ ಮಾರುಕೇರಿ ಪಂಚಾಯತಿ ವ್ಯಾಪ್ತಿಯ ಕೋಟಖಂಡದಲ್ಲಿ ಅನಧಿಕೃತವಾಗಿ ಕೆಂಪುಕಲ್ಲಿನ ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ
ಕಾರವಾರದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ತಂಡ ಮತ್ತು ಭಟ್ಕಳ ಕಂದಾಯ ಇಲಾಖೆಯ ತಂಡ ದಾಳಿ ನಡೆಸಿ ಯಂತ್ರೋಪಕರಣಗಳನ್ನು ವಶಕ್ಕೆ ಪಡೆದಿದ್ದಾರೆ.

ಮಾರುಕೇರಿ ಪಂಚಾಯತಿ ವ್ಯಾಪ್ತಿಯಲ್ಲಿ ಅನಧಿಕೃತ ಕೆಂಪುಕಲ್ಲಿನ ಗಣಿಗಾರಿಕೆ ನಡೆಯುತ್ತಿರುವ ಕುರಿತು ಗಣಿ ಇಲಾಖೆಗೆ ದೂರು ಬಂದಿತ್ತು.ಈ ಹಿನ್ನೆಲೆಯಲ್ಲಿ ಕಾರವಾರದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ತಂಡ ಮತ್ತು ಭಟ್ಕಳ ಕಂದಾಯ ಇಲಾಖೆಯ ತಂಡ ದಾಳಿ ನಡೆಸಿದೆ.

ದಾಳಿ ನಡೆಸಿದ ಅಧಿಕಾರಿಗಳು ಸ್ಥಳದಲ್ಲಿದ್ದ ಎರಡು ಟ್ರಿಲ್ಲರ್‌ ಮಷಿನ್‌,ಕಲ್ಲು ಸಾಗಾಟ ಮಾಡುತ್ತಿದ್ದ ಮೂರು ಮಿನಿ ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ವಿರುದ್ದ ಭೂ ವಿಜ್ಞಾನ ಮತ್ತು ಗಣಿ ಇಲಾಖೆಯ ನಿಯಮದ ಅನುಸಾರ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button