ಜಿಲ್ಲಾ ಸುದ್ದಿಹುಬ್ಬಳ್ಳಿ - ಧಾರವಾಡ

ಧಾರವಾಡ: ಬಸ್-ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸಾವು

ಧಾರವಾಡ : ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ, ಬೈಕ್ ಸವಾರನ ಮೇಲೆ ಬಸ್ ಹರಿದ ಪರಿಣಾಮವಾಗಿ ಬೈಕ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಧಾರವಾಡದಲ್ಲಿ ನಡೆದಿದೆ.

ನಗರದ ಹೊಸ ಬಸ್ ನಿಲ್ದಾಣ ಬಳಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಚಿಕ್ಕಮಲ್ಲಿಗವಾಡ ನಿವಾಸಿ ಯಲ್ಲಪ್ಪ ಮಹದೇವಪ್ಪ ಶಿಬಾರಗಟ್ಟಿ ಎಂದು ಗುರುತಿಸಲಾಗಿದೆ. ಇನ್ನೂ ಬೈಕ್​​​​​​​​​​​​​​​ ಸವಾರ ಚಿಕ್ಕಮಲಿಗವಾಡ ಗ್ರಾಮದಿಂದ ನಗರಕ್ಕೆ ಬರುತ್ತಿದ್ದ, ಹೊಸ ಬಸ್ ನಿಲ್ದಾಣದಿಂದ ಧರ್ಮಸ್ಥಳಕ್ಕೆ ನಸ್ ನಿಲ್ದಾದಿಂದ ಹೋರ ಬರುತಿತ್ತು, ಈ ವೇಳೆ ಬಸ್ ಚಾಲಕ‌ ಮುಂದೆ ಬರುತ್ತಿದ್ದ ಬೈಕ್ ನೋಡದೇ ಹಾಗೆ ಚಲಾಯಿಸಿದ್ದಾನಂತೆ, ಇದರಿಂದಾಗಿ ಬೈಕ್ ಬಸ್ ನಡುವೆ ಡಿಕ್ಕಿಯಾಗಿದೆ. ಘಟನೆ ನಡೆಯುತ್ತಿದ್ದಂತೆ ಸ್ಥಳದಲ್ಲಿ ನೂರಾರು ಜನ ಜಮಾಯಿಸಿದ್ದರು.

ಘಟನೆಯ ಸುದ್ದಿ ತಿಳಿದು ಸ್ಥಳಕ್ಕೆ ಧಾರವಾಡ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ, ಮೃತ ಬೈಕ ಸವಾರನ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಿದ್ದು, ಈ ಕುರಿತು ಧಾರವಾಡ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Spread the love

Related Articles

Leave a Reply

Your email address will not be published. Required fields are marked *

Back to top button