ಕೊಡಗು

ಕೊಡಗಿನಲ್ಲಿ ಆಧುನಿಕ ಡಯಾಲಿಸಿಸ್ ಚಿಕಿತ್ಸಾ ಕೇಂದ್ರಗಳು; ಮೂರು ತಾಲೂಕುಗಳಲ್ಲಿ ಸೌಲಭ್ಯ

ಜುಲೈ : ಕೊಡಗಿನ ಮೂರು ತಾಲ್ಲೂಕು ಕೇಂದ್ರಗಳಲ್ಲಿ ಡಯಾಲಿಸಿಸ್ ಚಿಕಿತ್ಸೆ ನೀಡುವ ಕೇಂದ್ರಗಳು ಇದ್ದು, ಮಡಿಕೇರಿಯ ಜಿಲ್ಲಾಸ್ಪತ್ರೆಯ ಡಯಾಲಿಸಿಸ್ ಘಟಕದ ಅಧೀನದಲ್ಲಿ ತಾಲ್ಲೂಕು ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ.

ಕೋವಿಡ್-19 ಸಾಂಕ್ರಾಮಿಕದ ರೋಗದ ಹಿನ್ನೆಲೆಯಲ್ಲಿ ಮಡಿಕೇರಿಯಲ್ಲಿರುವ ಜಿಲ್ಲಾ ಡಯಾಲಿಸಿಸ್ ಕೇಂದ್ರ ಕೊಡಗು ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಗೆ ವರ್ಗಾವಣೆಗೊಂಡಿದೆ. ಅತ್ಯಾಧುನಿಕ ತಂತ್ರಜ್ಞಾನಗಳ ಮೂಲಕ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಸೇರಿದಂತೆ ಇನ್ನಿತರ ಪರೀಕ್ಷೆಗೊಳಪಡಿಸಲಾಗುತ್ತದೆ. ನಿಯಮಿತವಾಗಿ 71 ರಿಂದ 75 ರೋಗಿಗಳು ಈ ಕೇಂದ್ರಕ್ಕೆ ಭೇಟಿ ನೀಡಿ ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದು, ವೈದ್ಯರು, 8 ಮಂದಿ ಸ್ಟಾಫ್ ನರ್ಸ್ ಗಳು ಹಾಗೂ ಡಿ ಗ್ರೂಪ್ ನೌಕರರು ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ.

ಪ್ರತಿ ಎರಡು ಅಥವಾ ಮೂರು ದಿನಗಳಿಗೆ ಒಂದು ಬಾರಿ ಡಯಾಲಿಸಿಸ್ ಮಾಡಿಸಿಕೊಳ್ಳಬೇಕಾದ ಅನಿವಾರ್ಯತೆ ಸಂಬಂಧಿತ ರೋಗಿಗಳಿಗೆ ಇದ್ದು, ಪ್ರತಿಯೊಬ್ಬರಿಗೂ ಸೌಲಭ್ಯ ದೊರಕುತ್ತಿದೆ. ಮುಂಚಿತವಾಗಿ ನೋಂದಣಿ‌ ಮಾಡುವ ಮೂಲಕ ಜನರು ಹಾಸಿಗೆಗಳನ್ನು ನೋಂದಾಯಿಸಿಕೊಳ್ಳಬೇಕಾಗುತ್ತದೆ. ಒಬ್ಬ ವ್ಯಕ್ತಿಯ ಚಿಕಿತ್ಸೆಗೆ ಬಳಸಿದ ಸಲಕರಣೆಗಳನ್ನು ಅದೇ ವ್ಯಕ್ತಿಗೆ ನಾಲ್ಕರಿಂದ ಐದು ಬಾರಿ‌ ಬಳಸಲಾಗುತ್ತದೆ. ಡಯಾಲಿಸಿಸ್ ಚಿಕಿತ್ಸೆಗೆ ಒಳಗಾದ ವ್ಯಕ್ತಿಗೆ ಉಪಯೋಗಿಸಿದ ಸಲಕರಣೆಗಳನ್ನು‌‌ ಮತ್ತೊಬ್ಬರಿಗೆ ಉಪಯೋಗಿಸಲಾಗುವುದಿಲ್ಲ. ಪ್ರತಿ ಕೇಂದ್ರಗಳಲ್ಲೂ ಪ್ರತ್ಯೇಕವಾಗಿ ಕೋವಿಡ್ ಸೋಂಕಿತರಿಗೂ ಡಯಾಲಿಸಿಸ್ ಸೌಲಭ್ಯವನ್ನು ಒದಗಿಸಲಾಗುತ್ತಿದೆ. ಕೋವಿಡ್ ಆರಂಭದ ದಿನಗಳಲ್ಲಿ ಆಸ್ಪತ್ರೆಯ ಸಿಬ್ಬಂದಿಗಳಿಗೆ ಸೋಂಕು ತಗಲಿದ್ದರಿಂದ, ಕೋವಿಡ್ ಸೋಂಕು ಹೊಂದಿರುವವರಿಗೆಂದು ಪ್ರತ್ಯೇಕವಾದ ಹಾಸಿಗೆಗಳನ್ನು ಮೀಸಲಿಡಲಾಗಿದೆ.

ಮಡಿಕೇರಿಯ ಡಯಾಲಿಸಿಸ್ ಕೇಂದ್ರದಲ್ಲಿ ಪರೀಕ್ಷೆ ನಡೆಸಿ ನಂತರ ಹೆಚ್ಚುವರಿ ಪರೀಕ್ಷೆಗಳಿಗಾಗಿ ಮೈಸೂರಿನ ಡಯಾಲಿಸಿಸ್ ಸೆಂಟರ್ ಗೆ ಕಳುಹಿಸಲಾಗುತ್ತದೆ. ನಂತರ ಚಿಕಿತ್ಸೆ ಪಡೆಯುವವರಿಗೆ ಸ್ಥಳೀಯವಾಗಿರುವ ಡಯಾಲಿಸಿಸ್ ಘಟಕಕ್ಕೆ ಶಿಫಾರಸ್ಸು ಮಾಡುವ ಮೂಲಕ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ.

Spread the love

Related Articles

Leave a Reply

Your email address will not be published. Required fields are marked *

Back to top button