ಉತ್ತರ ಕನ್ನಡ

ಶಿರಸಿ: ಮನೆ ಗೋಡೆ ಕುಸಿದು ಮಹಿಳೆ ಸಾವು

ಕಾರವಾರ : ಮನೆ ಗೋಡೆ ಕುಸಿದು ಓರ್ವ ಮಹಿಳೆ ಮೃತಪಟ್ಟ ಘಟನೆ ಶಿರಸಿ ತಾಲೂಕಿನ ಗುಡ್ನಾಪುರ ಗ್ರಾಮ ಪಂಚಾಯತ ವ್ಯಾಪ್ತಿಯ ಮುಂಡಿಗೆಹಳ್ಳ ಗ್ರಾಮದಲ್ಲಿ ನಡೆದಿದೆ..ಮನೆ ಗೋಡೆ ಕುಸಿದು ಮೃತಪಟ್ಟ ಮಹಿಳೆಯನ್ನು ಯಶೋದಾ ಬಂಗಾರಿ ಗೌಡ ಎಂದು ಗುರುತಿಸಲಾಗಿದೆ.

ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಮೃತರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.

ಅನ್ಯ ಕಾರ್ಯಕ್ರಮವನ್ನು ಅರ್ಧಕ್ಕೆ ಮೊಟಕುಗೊಳಿಸಿದ ಸಚಿವ ಶಿವರಾಮ ಹೆಬ್ಬಾರ್ ಅವರು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಅಂತ್ಯ ಸಂಸ್ಕಾರಕ್ಕೆ ವೈಯಕ್ತಿಕ ಧನ ಸಹಾಯವನ್ನು ನೀಡಿದರು.ಹಾಗೂ 5 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದರು.ಮುಂದಿನ 48 ಗಂಟೆಗಳ ಒಳಗಾಗಿ ಪರಿಹಾರ ಧನವನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಕುಲಕರ್ಣಿ,ಡಿ.ವೈ,ಎಸ್.ಪಿ.ರವಿ ನಾಯ್ಕ, ಸಿ.ಪಿ.ಆಯ್. ರಾಮಚಂದ್ರ ನಾಯಕ,ಬನವಾಸಿ ಪಿ.ಎಸ್.ಆಯ್.,ಗ್ರಾಮ ಪಂಚಾಯತ ಅಧ್ಯಕ್ಷರು,ಉಪಾಧ್ಯಕ್ಷರು,ಸ್ಥಳೀಯ ಮುಖಂಡರು,ಕಂದಾಯ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Spread the love

Related Articles

Leave a Reply

Your email address will not be published. Required fields are marked *

Back to top button