ಮಂಡ್ಯ

ಸಿಐಡಿ ತಂಡಕ್ಕೆ ಸಹಕಾರ: ಮನ್ಮುಲ್ ಅಧ್ಯಕ್ಷ ರಾಮಚಂದ್ರ

ಮಂಡ್ಯ : ಮನ್ಮುಲ್ ನಲ್ಲಿ ಹಾಲಿಗೆ ನೀರು ಮಿಶ್ರಣ ಪ್ರಕರಣಕ್ಕೆ ಸಂಬಂದಿಸಿದಂತೆ ಸಿಐಡಿ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಈಗಾಗಲೇ ಅನೇಕ ದಾಖಲೆಗಳನ್ನು ಪರಿಶೀಲಿಸಿದ್ದು ಅಧಿಕಾರಿಗಳಿಗೆ ಆಡಳಿತ ಮಂಡಳಿ ಸಂಪೂರ್ಣ ಸಹಕಾರ ನೀಡಲು ಸಿದ್ದರಿದ್ದೇವೆ ಎಂದು ಮನ್ಮುಲ್ ಅಧ್ಯಕ್ಷ ರಾಮಚಂದ್ರ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಿಐಡಿ ಇನ್ಸ್ ಪೆಕ್ಟರ್ ನರೇಂದ್ರಕುಮಾರ್ ನೇತೃತ್ವದಲ್ಲಿ ತನಿಖೆ ಆರಂಭವಾಗಿದೆ. ಸಿಐಡಿ ನಡೆಸುವ ಯಾವುದೇ ತನಿಖೆಗೂ ನಮ್ಮ ಆಡಳಿತ ಮಂಡಳಿ ಸಿದ್ದವಿದೆ. ಅಲ್ಲದೆ, ತನಿಖೆಯಿಂದ ನ್ಯಾಯ ಸಿಗುವ ಭರವಸೆಯಿದ್ದು ನಾವು ಅಧಿಕಾರಿಗಳಿಗೆ ಸಹಕರಿಸುತ್ತೇವೆ ಎಂದರು.

Spread the love

Related Articles

Leave a Reply

Your email address will not be published. Required fields are marked *

Back to top button