ಹುಬ್ಬಳ್ಳಿ - ಧಾರವಾಡ

ಹುಬ್ಬಳ್ಳಿ-ಧಾರವಾಡ: ಪರೀಕ್ಷಾ ಕೇಂದ್ರಗಳ ಕಡೆ ಮುಖ ಮಾಡಿದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು

ಧಾರವಾಡ: ಅವಳಿನಗರದಲ್ಲಿ ಈಗಾಗಲೇ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳ ಕಡೆಗೆ ಮುಖ ಮಾಡಿದ್ದು, ಪರೀಕ್ಷೆಯ ಅಗತ್ಯ ದಾಖಲಾತಿಯೊಂದಿಗೆ ಪರೀಕ್ಷೆ ಕೇಂದ್ರಗಳಿಗೆ ವಿದ್ಯಾರ್ಥಿಗಳು ಆಗಮಿಸುತ್ತಿದ್ದಾರೆ. ವಿದ್ಯಾರ್ಥಿಗಳ ಪೋಷಕರು ತಮ್ಮ ತಮ್ಮ ಮಕ್ಕಳನ್ನು ಈಗ ಪರೀಕ್ಷೆ ಕೇಂದ್ರಗಳಿಗೆ ಕರೆದುಕೊಂಡು ಬರುತ್ತಿದ್ದು, ಹಾಗೇ ಕರೆದುಕೊಂಡ ಬಂದ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದಲ್ಲಿ ಕೊರೊನಾ ಮಾರ್ಗಸೂಚಿಯೊಂದಿಗೆ ಶಾಲೆಯ ಸಿಬ್ಬಂದಿ ಸ್ವಾಗತ ಮಾಡಿಕೊಳ್ಳುತ್ತಿದ್ದಾರೆ.

ಹುಬ್ಬಳ್ಳಿಯ ಲ್ಯಾಮಿಂಗಟನ್ ಹೈ ಸ್ಕೂಲ್ ‌ನಲ್ಲಿ ಈಗಾಗಲೇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಪರೀಕ್ಷೆ ಬರೆಯಲು ಬರುವಂತಹ ವಿದ್ಯಾರ್ಥಿಗಳಿಗೆ, ಸ್ಯಾನಿಟೈಸ್, ಥರ್ಮಲ್ ಸ್ಕ್ಯಾನಿಂಗ್, ಮಾಸ್ಕ್ ನೀಡಿ ಪರೀಕ್ಷಾ ಕೊಠಡಿಗಳಿಗೆ ಪ್ರವೇಶ ನೀಡಲಾಗುತ್ತಿದೆ. ಈಗಾಗಲೇ ಶಾಲೆಗಳ ಶಿಕ್ಷಕರು ಜಿಲ್ಲೆಯ ಆಯಾ ಶಾಲೆಗಳಲ್ಲಿ ಪರೀಕ್ಷೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಒಂದು ವೇಳೆ ಕೊರೊನಾ ಲಕ್ಷಣ ಕಾಣಿಸಿಕೊಂಡ ವಿದ್ಯಾರ್ಥಿಗಳಿಗೂ ಪ್ರತ್ಯೇಕ ಪ್ರತಿ ಕೇಂದ್ರದಲ್ಲೂ ಎರಡು ಕೊಠಡಿಗಳನ್ನು ಮೀಸಲು ಇಡಲಾಗಿದೆ.

ಧಾರವಾಡ ಜಿಲ್ಲೆಯಾದ್ಯಂತ ಒಟ್ಟು 413 ಪ್ರೌಢಶಾಲೆಗಳಿದ್ದು, 161 ಪರೀಕ್ಷಾ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗಿದ್ದು, ಪ್ರತಿ ಕೊಠಡಿಗಳಲ್ಲಿ ಮಕ್ಕಳ ಸುರಕ್ಷತಾ ಕ್ರಮದೊಂದಿಗೆ 24 ವಿಧ್ಯಾರ್ಥಿಗಳಿಗೆ ಮಾತ್ರ ಆಸನ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷೆ ಕೊಠಡಿಯಲ್ಲಿ ಜಿಗ್ ಜಾಗ್ ಮಾದರಿಯಲ್ಲಿ ವಿದ್ಯಾರ್ಥಿಗಳ ಆಸನ ಸಿದ್ಧಪಡಿಸಲಾಗಿದೆ. ಎಸ್‍ಎಸ್‍ಎಲ್‍ಸಿ ಪರೀಕ್ಷೆ ಕೇವಲ ಎರಡು ದಿನ ಮಾತ್ರ ನಡೆಯಲಿದ್ದು, ಈ ಬಾರಿ ಧಾರವಾಡ ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿ ಗೆ 29,456 ವಿದ್ಯಾಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಹುಬ್ಬಳ್ಳಿ ಶಹರ ವ್ಯಾಪ್ತಿಯ 121 ಪ್ರೌಢಶಾಲೆಗಳ 8,768 ವಿದ್ಯಾರ್ಥಿಗಳು, ಧಾರವಾಡ ಶಹರ ವ್ಯಾಪ್ತಿಯ 90 ಪ್ರೌಢಶಾಲೆಗಳ 5,771 ವಿದ್ಯಾರ್ಥಿಗಳು, ಧಾರವಾಡ ಗ್ರಾಮೀಣ ವ್ಯಾಪ್ತಿಯ 43 ಪ್ರೌಢಶಾಲೆಗಳ 3,800 ವಿದ್ಯಾರ್ಥಿಗಳು, ಹುಬ್ಬಳ್ಳಿ ಗ್ರಾಮೀಣ ವ್ಯಾಪ್ತಿಯ 52 ಪ್ರೌಢಶಾಲೆಗಳ 3,802 ವಿದ್ಯಾರ್ಥಿಗಳು, ಕಲಘಟಗಿ ತಾಲೂಕು ವ್ಯಾಪ್ತಿಯ 34 ಪ್ರೌಢಶಾಲೆಗಳ 2,650 ವಿದ್ಯಾರ್ಥಿಗಳು, ಕುಂದಗೋಳ ತಾಲೂಕು ವ್ಯಾಪ್ತಿಯ 37 ಪ್ರೌಢಶಾಲೆಗಳ 2,300 ವಿದ್ಯಾರ್ಥಿಗಳು ಮತ್ತು ನವಲಗುಂದ ತಾಲೂಕು ವ್ಯಾಪ್ತಿಯ 39 ಪ್ರೌಢಶಾಲೆಗಳ 2,365 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 29,456 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.

161 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಹುಬ್ಬಳ್ಳಿ ಶಹರ ವ್ಯಾಪ್ತಿಯಲ್ಲಿ 39, ಧಾರವಾಡ ಶಹರ ವ್ಯಾಪ್ತಿಯಲ್ಲಿ 28, ಧಾರವಾಡ ಗ್ರಾಮೀಣ ವ್ಯಾಪ್ತಿಯಲ್ಲಿ 22, ಹುಬ್ಬಳ್ಳಿ ಗ್ರಾಮೀಣ ವ್ಯಾಪ್ತಿಯಲ್ಲಿ 23, ಕಲಘಟಗಿ ತಾಲೂಕು ವ್ಯಾಪ್ತಿಯಲ್ಲಿ 16, ಕುಂದಗೋಳ ತಾಲೂಕು ವ್ಯಾಪ್ತಿಯಲ್ಲಿ 15 ಮತ್ತು ನವಲಗುಂದ ತಾಲೂಕು ವ್ಯಾಪ್ತಿಯಲ್ಲಿ 18 ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 161 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

Spread the love

Related Articles

Leave a Reply

Your email address will not be published. Required fields are marked *

Back to top button