ಬಾಗಲಕೋಟೆ

ಬಾಗಲಕೋಟೆಯಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯಲ್ಲಿ ಎಸ್ ಎಸ್ ಎಲ್ ಪರೀಕ್ಷೆ ಶುರುವಾಗಿದೆ. ಬಾಗಲಕೋಟೆ ನವನಗರದ ಕಾಳಿದಾಸ ಶಿಕ್ಷಣ ಸಂಸ್ಥೆಯ ಎಸ್ ಬೌ ಪಾಟೀಲ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಪರೀಕ್ಷಾ ಕೇಂದ್ರದ ಮುಂದೆ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ರೀನಿಂಗ್,ಸ್ಯಾನಿಟೈಸ್ ಮಾಡಿ ಪರೀಕ್ಷಾ ಕೇಂದ್ರದೊಳಗೆ ಕಳುಹಿಸಲಾಯಿತು.

ಪರೀಕ್ಷಾ ಕೊಠಡಿಯಲ್ಲಿ ಪ್ರತಿ ಡೆಸ್ಕ್ ಗೆ ಒಬ್ಬರಂತೆ ಒಟ್ಟು 12 ವಿದ್ಯಾರ್ಥಿಳು ಇರಬೇಕು. ಜಿಲ್ಲೆಯಲ್ಲಿ ಒಟ್ಟು 32805 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, 173 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. 5355 ಸಿಬ್ಬಂದಿಯನ್ನು ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಲಾಗಿದೆ. ಪರೀಕ್ಷಾ ಪೂರ್ವ ಮತ್ತು ಪರೀಕ್ಷೆಯ ನಂತರ ಸೋಂಕು ನಿವಾರಕ ದ್ರಾವಣದಿಂದ ಕೊಠಡಿ, ಪೀಠೋಪಕರಣ ಮತ್ತು ಶೌಚಾಲಯಗಳನ್ನು ಸ್ಯಾನಿಟೈಜರ್ ಮಾಡಿದ್ದು, ಗ್ರಾಮೀಣ ಭಾಗದಲ್ಲಿ ಗ್ರಾ.ಪಂ ಪಿಡಿಓ ಹಾಗೂ ನಗರ ಪ್ರದೇಶದಲ್ಲಿ ಮುಖ್ಯಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ಕೆಮ್ಮು, ನೆಗಡಿ, ಜ್ವರದ ಲಕ್ಷಣಗಳಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷೆ ಪ್ರಾರಂಭದ ಪೂರ್ವದಲ್ಲಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆಗೆ ಪ್ರತಿಯೊಂದು ಪರೀಕ್ಷಾ ಕೇಂದ್ರಕ್ಕೆ ಆರೋಗ್ಯ ಸಿಬ್ಬಂದಿಯನ್ನು ನಿಯೋಜಿಸಿದ್ದು, ತಾಲೂಕಿಗೆ ಒಂದರಂತೆ ತುರ್ತು ಚಿಕಿತ್ಸಾ ವಾಹನ ಪರೀಕ್ಷಾ ದಿನಗಳಂದು ಮೀಸಲಿಡಲಾಗಿದೆ. ಪರೀಕ್ಷೆ ಕೇಂದ್ರ ಬಳಿ ಪೊಲೀಸ್ ಸಿಬ್ಬಂದಿ ಬಿಗಿಬಂದೋಬಸ್ತ್ ನೇಮಿಸಿದ್ದು, ಶುದ್ದ ಕುಡಿಯುವ ನೀರಿನ ವ್ಯವಸ್ಥೆ, ಕೈತೊಳೆಯಲು ಸಾಬೂನು ಇಲ್ಲವೇ ಹ್ಯಾಂಡ್‍ವಾಷ್ ವ್ಯವಸ್ಥೆ ಇದೆ.

Spread the love

Related Articles

Leave a Reply

Your email address will not be published. Required fields are marked *

Back to top button